ಬೆಂಗಳೂರು: ರಾಜ್ಯದಲ್ಲಿ ದೌರ್ಜನ್ಯ ತಡೆ ಕಾಯ್ದೆಯಡಿಯಲ್ಲಿ ನೀಡಲಾಗುವ ಶಿಕ್ಷೆಯ ಪ್ರಮಾಣ 5%-6% ಗಳಷ್ಟು ಮಾತ್ರವೇ ಇದೆ. ಇದರ ಪ್ರಮಾಣವನ್ನು ಹೆಚ್ಚಿಸುವ ಸಲುವಾಗಿ ವ್ಯಾಜ್ಯ ಮತ್ತು ಅಭಿಯೋಗ ಇಲಾಖೆ, ಪೊಲೀಸ್ ಇಲಾಖೆ ಹೆಚ್ಚು ಕಾಳಜಿಯಿಂದ ಕೆಲಸ ಮಾಡಬೇಕು ಎಂದು ಮುಖ್ಯಮಂತ್ರಿ ಯಡಿಯೂರಪ್ಪ ಅವರು ತಿಳಿಸಿದ್ದಾರೆ.
ದೌರ್ಜನ್ಯ ತಡೆ ಕಾಯ್ದೆಗೆ ಸಂಬಂಧಿಸಿದಂತೆ ಸಮಾಜ ಕಲ್ಯಾಣ ಇಲಾಖೆ ನಡೆಸಿದ ರಾಷ್ಟ್ರ ಮಟ್ಟದ ಜಾಗೃತಿ ಮತ್ತು ಉಸ್ತುವಾರಿ ಸಮಿತಿಯ ಸಭೆಯಲ್ಲಿ ಭಾಗವಹಿಸಿದ ಮುಖ್ಯಮಂತ್ರಿಗಳು, ಈ ವಿಚಾರಕ್ಕೆ ಸಂಬಂಧಿಸಿದಂತೆ ಮಾತನಾಡಿದ್ದಾರೆ.
ರಾಜ್ಯದಲ್ಲಿ ಪರಿಶಿಷ್ಟ ಜಾತಿ, ಪ.ಪಂಗಡದ ಮೇಲಾಗುವ ದೌರ್ಜನ್ಯದ ಪ್ರಕರಣಗಳ ಸಂದರ್ಭದಲ್ಲಿ ದೂರು ಸಲ್ಲಿಸುವ ವಿಡಿಯೋಗಳನ್ನು ಸಹ ಮಾಡುವುದಕ್ಕೆ ಪೂರಕವಾಗುವಂತೆ ಕ್ರಮ ವಹಿಸುವಂತೆಯೂ ಮುಖ್ಯಮಂತ್ರಿಗಳು ಸೂಚನೆ ನೀಡಿದ್ದಾರೆ. ಜೊತೆಗೆ ಘಟನೆ ನಡೆದ 60 ದಿನಗಳೊಳಗಾಗಿ ತನಿಖೆ ಪೂರ್ಣಗೊಳಿಸಿ, ನ್ಯಾಯಾಲಯಕ್ಕೆ ದಾಖಲೆಗಳನ್ನು ಒದಗಿಸಬೇಕು ಎಂದು ತಿಳಿಸಿದ್ದಾರೆ. ಸಾಕ್ಷಿದಾರರು ಮತ್ತು ಸಂತ್ರಸ್ತರಿಗೆ ಸೂಕ್ತ ರಕ್ಷಣೆಯ ಜೊತೆಗೆ ತನಿಖೆಯಲ್ಲಿ ಯಾವುದೇ ಲೋಪವಾಗದಂತೆ ಸಂಪೂರ್ಣ ಎಚ್ಚರಿಕೆ ವಹಿಸಬೇಕು ಎಂದೂ ಅವರು ತಿಳಿಸಿದ್ದಾರೆ.
ಅದರೊಂದಿಗೆ ಪರಿಶಿಷ್ಟ ಜಾತಿ/ಪಂಗಡಗಳ ಕಾಲೋನಿ, ತಾಂಡಾಗಳಲ್ಲಿ ಕನಿಷ್ಠ 100 ಜನ ಪಡಿತರ ಚೀಟಿ ಹೊಂದಿದ್ದರೆ, ಅಂತಹ ಪ್ರದೇಶಗಳಲ್ಲಿ ನ್ಯಾಯಬೆಲೆ ಅಂಗಡಿ ತೆರೆದು ಆಹಾರ ಭದ್ರತೆ ಒದಗಿಸಲು ಕ್ರಮ ಕೈಗೊಳ್ಳಬೇಕು ಎಂದು ಮುಖ್ಯಮಂತ್ರಿ ತಿಳಿಸಿದ್ದಾರೆ. ಜೊತೆಗೆ ನಿಗದಿತ ಅವಧಿಯೊಳಗೆ ದೌರ್ಜನ್ಯಕ್ಕೆ ಒಳಗಾದವರಿಗೆ ಪರಿಹಾರ ಒದಗಿಸಿಕೊಡುವ ನಿಟ್ಟಿನಲ್ಲಿ ಕಾರ್ಯ ಪ್ರವೃತ್ತರಾಗುವಂತೆ ಜಿಲ್ಲಾಧಿಕಾರಿಗಳಿಗೂ ಮುಖ್ಯಮಂತ್ರಿ ಯಡಿಯೂರಪ್ಪ ಆದೇಶಿಸಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.