ಬೆಂಗಳೂರು: ಕೊರೋನಾ ಸಂಕಷ್ಟದಿಂದ ಪರದಾಡುತ್ತಿದ್ದ ಕೆಎಸ್ಆರ್ಟಿಸಿಯ ಸಿಬ್ಬಂದಿಗಳಿಗೆ ಬಾಕಿ ಉಳಿದ ವೇತನ ಬಿಡುಗಡೆ ಮಾಡಲು ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಅವರು 634 ಕೋಟಿ 50 ಲಕ್ಷ ರೂ.ಗಳನ್ನು ಬಿಡುಗಡೆ ಮಾಡಿ ಆದೇಶ ನೀಡಿದ್ದಾರೆ.
ಕೊರೋನಾ ಕಾರಣದಿಂದಾಗಿ ಸಾರಿಗೆ ಇಲಾಖೆ ನಷ್ಟದಲ್ಲಿದೆ. ಈ ಹಿನ್ನೆಲೆಯಲ್ಲಿ ನೌಕರರಿಗೆ ವೇತನ ನೀಡುವುದಕ್ಕೂ ಪರದಾಟ ನಡೆಸಬೇಕಾದ ಸ್ಥಿತಿ ನಿರ್ಮಾಣವಾಗಿದೆ. ಈ ಹಿನ್ನೆಲೆಯಲ್ಲಿ ಸಾರಿಗೆ ನೌಕರರ ನೋವಿಗೆ ಸ್ಪಂದಿಸಿದ ಸಿಎಂ ಯಡಿಯೂರಪ್ಪ ಕೂಡಲೇ 3 ತಿಂಗಳ ವೇತನ ಬಿಡುಗಡೆಗೆ ಆದೇಶ ನೀಡಿದ್ದಾರೆ. ಆ ಮೂಲಕ ಸಾರಿಗೆ ನೌಕರರ ಮನೆಯಲ್ಲಿಯೂ ದೀಪಾವಳಿ ಹಬ್ಬದ ಸಂತೋಷಮಯ ವಾತಾವರಣವನ್ನು ನಿರ್ಮಾಣ ಮಾಡಿದ್ದಾರೆ.
ಸಂಬಳವಿಲ್ಲದೆ ಪರದಾಡುತ್ತಿದ್ದ ನೌಕರರ ಸಂಕಷ್ಟವನ್ನು ಗಮನಿಸಿದ ಡಿಸಿಎಂ, ಸಾರಿಗೆ ಸಚಿವ ಲಕ್ಷ್ಮಣ್ ಸವದಿ ಅವರು ಈ ವಿಚಾರವನ್ನು ಮುಖ್ಯಮಂತ್ರಿ ಯಡಿಯೂರಪ್ಪ ಅವರ ಗಮನಕ್ಕೆ ತಂದಿದ್ದಾರೆ. ತಕ್ಷಣವೇ ಪರಿಸ್ಥಿತಿಯ ಗಂಭೀರತೆಯನ್ನು ಅರಿತ ಮುಖ್ಯಮಂತ್ರಿ ಸಂಬಂಧಪಟ್ಟ ಅಧಿಕಾರಿಗಳಿಗೆ ನೌಕರರ ಅಕ್ಟೋಬರ್, ನವೆಂಬರ್ ಮತ್ತು ಡಿಸೆಂಬರ್ ತಿಂಗಳ ವೇತನ ಪಾವತಿಗೆ ಪೂರಕವಾಗಿ 634 ಕೋಟಿಯ 50 ಲಕ್ಷ ರೂ. ಗಳನ್ನು ತಕ್ಷಣವೇ ಬಿಡುಗಡೆ ಮಾಡುವಂತೆ ಆಜ್ಞಾಪಿಸಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.