ಬೆಂಗಳೂರು: ತಮ್ಮ ಕ್ಷೇತ್ರಗಳಲ್ಲಿ ಅಭಿವೃದ್ಧಿ ಕಾರ್ಯಗಳನ್ನು ಕೈಗೊಳ್ಳುವ ಸಲುವಾಗಿ 3 ಕೋಟಿ ರೂ. ಗಳನ್ನು ಬಿಡುಗಡೆ ಮಾಡುವಂತೆ ಸಂಸದರು ರಾಜ್ಯ ಸರ್ಕಾರಕ್ಕೆ ಸಲ್ಲಿಸಿದ್ದ ಮನವಿಗೆ ಸಿಎಂ ಯಡಿಯೂರಪ್ಪ ಸಕಾರಾತ್ಮಕ ಸ್ಪಂದನೆ ನೀಡಿದ್ದು, ಶೀಘ್ರದಲ್ಲೇ ಹಣ ಬಿಡುಗಡೆಗೆ ಕ್ರಮ ಕೈಗೊಳ್ಳುವ ಭರವಸೆಯನ್ನು ನೀಡಿದ್ದಾರೆ.
ರಾಜ್ಯದ ಸಂಸದರ ಜೊತೆಗೆ ಸಭೆ ನಡೆಸಿದ ಅವರು, ಈ ಭರವಸೆಯನ್ನು ನೀಡಿದ್ದಾರೆ ಎಂದು ಮೂಲಗಳು ತಿಳಿಸಿವೆ. ಈ ಸಂದರ್ಭದಲ್ಲಿ ಸಂಸದರು ಹಲವು ಮನವಿಗಳನ್ನು ಸರ್ಕಾರದ ಮುಂದಿಟ್ಟಿದ್ದಾರೆ ಎಂದು ಸಂಬಂಧಿಸಿದ ಅಧಿಕಾರಿಗಳು ತಿಳಿಸಿದ್ದಾರೆ.
ಸಂಸದರ ನಿಧಿಯಿಂದ ಓರ್ವ ಸಂಸದನಿಗೆ ತಲಾ 3 ಕೋಟಿ ರೂ. ಗಳಂತೆ ತಮ್ಮ ಕ್ಷೇತ್ರದ ಅಭಿವೃದ್ಧಿ ಮಾಡಲು ನೀಡುವಂತೆ ಮನವಿ ಸಲ್ಲಿಸಲಾಯಿತು. ರಾಜ್ಯದಲ್ಲಿ ಮೆಕ್ಕೆಜೋಳ ಮತ್ತು ಭತ್ತದ ಇಳುವರಿ ಈ ಬಾರಿ ಹೆಚ್ಚಾಗಿದೆ. ಈ ಹಿನ್ನೆಲೆಯಲ್ಲಿ ಬೆಲೆ ಕುಸಿತವಾಗುವ ಸಂಭವವಿದ್ದು, ಸರ್ಕಾರ ಮಧ್ಯ ಪ್ರವೇಶಿಸಿ ಬೆಂಬಲ ಬೆಲೆ ನೀಡುವಂತೆಯೂ ಸಂಸದರು ಸರ್ಕಾರಕ್ಕೆ ತಿಳಿಸಿದ್ದಾರೆ. ಅದರೊಂದಿಗೆ ಕಲ್ಬರ್ಗಿ ಇಎಸ್ಐ ಆಸ್ಪತ್ರೆ ಉನ್ನತೀಕರಣಕ್ಕೆ ಈಗಾಗಲೇ ಕೇಂದ್ರ ಸರ್ಕಾರಕ್ಕೆ ಪತ್ರ ಬರೆಯಲಾಗಿದ್ದು, ರಾಜ್ಯ ಸರ್ಕಾರ ಅಗತ್ಯ ಅನುಮತಿಗಳನ್ನು ನೀಡಬೇಕು. ಕೂಡ್ಲಿಗಿ ಮತ್ತು ಸಂಡೂರು ತಾಲೂಕುಗಳ ಕೆರೆಗಳಿಗೆ ತುಂಗಭದ್ರಾ ನದಿಯಿಂದ ನೀರು ಹರಿಸಬೇಕು ಎಂಬ ಮನವಿಯನ್ನು ಸರ್ಕಾರಕ್ಕೆ ಇದೇ ಸಂದರ್ಭದಲ್ಲಿ ಸಂಸದರು ಸಲ್ಲಿಸಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.