ನವದೆಹಲಿ: ಕೊರೋನಾ ಸೋಂಕಿನ ಹಿನ್ನೆಲೆಯಲ್ಲಿ ಮಾರುಕಟ್ಟೆ ಪ್ರದೇಶಗಳಿಗೆ ಸಂಬಂಧಿಸಿದಂತೆ ಕೇಂದ್ರ ಗೃಹ ಸಚಿವಾಲಯವು ನೂತನ ಮಾರ್ಗಸೂಚಿ ಯನ್ನು ಪ್ರಕಟಿಸಿದೆ.
ಮಾರುಕಟ್ಟೆ ಪ್ರದೇಶಗಳಲ್ಲಿ ಮಾಸ್ಕ್ ಧರಿಸದಿದ್ದರೆ ದಂಡ, ಸೂಚಿಸಿದ ಸಮಯದಲ್ಲಿ ವ್ಯಾಪಾರ ವಹಿವಾಟುಗಳನ್ನು ನಡೆಸುವವರಿಗೆ ರಿಯಾಯಿತಿ, ಕಂಟೈನ್ಮೆಂಟ್ ಝೋನ್ಗಳಲ್ಲಿನ ಮಾರುಕಟ್ಟೆ ಪ್ರದೇಶಗಳನ್ನು ಕೊರೋನಾ ಮುನ್ನೆಚ್ಚರಿಕೆಯಾಗಿ ತೆರೆಯದೇ ಇರುವುದು ಸೇರಿದಂತೆ ಇನ್ನೂ ಹಲವಾರು ಮುಂಜಾಗ್ರತಾ ಕ್ರಮಗಳನ್ನು ವಹಿಸುವಂತೆ ಈ ಮಾರ್ಗಸೂಚಿಯಲ್ಲಿ ಕೇಂದ್ರ ಗೃಹ ಇಲಾಖೆ ಸೂಚಿಸಿದೆ.
ಅದರಂತೆ ಮಾರುಕಟ್ಟೆ ಪ್ರದೇಶಗಳಲ್ಲಿ ಕೊರೋನಾ ಸೋಂಕಿನ ಪ್ರಮಾಣದಲ್ಲಿ ಏರಿಕೆ ಕಂಡುಬಂದ ಸಂದರ್ಭದಲ್ಲಿ ಮಾರುಕಟ್ಟೆ ಪ್ರದೇಶವನ್ನು ಮುಚ್ಚುವಂತೆಯೂ ಸೂಚಿಸಿದೆ. ಅದರೊಂದಿಗೆ ಆನ್ಲೈನ್ ಶಾಪಿಂಗ್ಗೆ ಸಂಬಂಧಿಸಿದಂತೆ ದಿನಸಿ ವಸ್ತುಗಳ ಆನ್ಲೈನ್ ಬುಕ್ಕಿಂಗ್ಗೆ, ಗ್ರಾಹಕರ ಮನೆ ಬಾಗಿಲಿಗೆ ದಿನಸಿ ವಸ್ತುಗಳನ್ನು ತಲುಪಿಸುವ ಕ್ರಮಕ್ಕೂ ಕೇಂದ್ರ ಸರ್ಕಾರ ಈ ಮಾರ್ಗಸೂಚಿಯಲ್ಲಿ ಉತ್ತೇಜನ ನೀಡಿದೆ. ಅದರಂತೆ ಮಾರುಕಟ್ಟೆ ಪ್ರದೇಶಗಳ ಪ್ರವೇಶದಲ್ಲಿ ವಾಹನ ನಿಲುಗಡೆ ಸ್ಥಳಗಳಲ್ಲಿ ಸರ್ಕಾರ ಸೂಚಿಸಿದ ದರಕ್ಕೆ ಮಾಸ್ಕ್ಗಳನ್ನು ವಿತರಣೆ ಮಾಡುವ ಕಿಯೋಸ್ಕ್ಗಳನ್ನು ಅಳವಡಿಕೆ ಮಾಡುವಂತೆಯೂ ಗೃಹ ಸಚಿವಾಲಯ ತನ್ನ ಮಾರ್ಗಸೂಚಿಯಲ್ಲಿ ತಿಳಿಸಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.