ನವದೆಹಲಿ: ಶಿಕ್ಷಣ ಸಚಿವ ರಮೇಶ್ ಪೋಖ್ರಿಯಾಲ್ ‘ನಿಶಾಂಕ್’ ಅವರು ಮಾತೃಭಾಷೆಯಲ್ಲಿ ತಾಂತ್ರಿಕ ಶಿಕ್ಷಣವನ್ನು ನೀಡುವ ಬಗ್ಗೆ ಮಾರ್ಗಸೂಚಿಯನ್ನು ಸಿದ್ಧಪಡಿಸಲು ಕಾರ್ಯಪಡೆಯನ್ನು ರಚಿಸಿದ್ದಾರೆ.
ಉನ್ನತ ಶಿಕ್ಷಣ ಕಾರ್ಯದರ್ಶಿಯವರ ಅಧ್ಯಕ್ಷತೆಯಲ್ಲಿ ಸ್ಥಾಪಿಸಲಾದ ಕಾರ್ಯಪಡೆ ವಿವಿಧ ಮಧ್ಯಸ್ಥಗಾರರ ಸಲಹೆಗಳನ್ನು ಗಣನೆಗೆ ತೆಗೆದುಕೊಂಡು ಒಂದು ತಿಂಗಳಲ್ಲಿ ವರದಿಯನ್ನು ಸಲ್ಲಿಸಲಿದೆ. ಮಾತೃಭಾಷೆಯಲ್ಲಿ ತಾಂತ್ರಿಕ ಶಿಕ್ಷಣ ನೀಡುವ ಕುರಿತು ನಿನ್ನೆ ನಡೆದ ಉನ್ನತ ಮಟ್ಟದ ಸಭೆಯಲ್ಲಿ ಸಚಿವರು ಈ ನಿರ್ಧಾರ ಕೈಗೊಂಡಿದ್ದಾರೆ.
ಸಭೆಯಲ್ಲಿ ಉನ್ನತ ಶಿಕ್ಷಣ ಕಾರ್ಯದರ್ಶಿ ಅಮಿತ್ ಖರೆ, ಐಐಟಿ ನಿರ್ದೇಶಕರು, ಶಿಕ್ಷಣ ತಜ್ಞರು ಮತ್ತು ಸಚಿವಾಲಯದ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು. ಎನ್ಇಪಿ- 2020 ಅನುಷ್ಠಾನಕ್ಕೆ ಸಂಬಂಧಿಸಿದಂತೆ ಚರ್ಚೆ ನಡೆಸುವುದು ಮತ್ತು ಉದ್ದೇಶವನ್ನು ಈಡೇರಿಸುವುದು ಸಭೆಯ ಅಜೆಂಡಾವಾಗಿತ್ತು.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.