ನವದೆಹಲಿ: ಕಳೆದ 19 ವರ್ಷಗಳಿಂದ ತಲೆ ಮರೆಸಿಕೊಂಡಿದ್ದ ನಿಷೇಧಿತ ಸ್ಟೂಡೆಂಟ್ ಇಸ್ಲಾಮಿಕ್ ಮೂವ್ಮೆಂಟ್ ಆಫ್ ಇಂಡಿಯಾ (ಸಿಮಿ) ಸಂಘಟನೆಯ ಸದಸ್ಯನೊಬ್ಬನನ್ನು ದೆಹಲಿ ಪೊಲೀಸ್ ವಿಶೇಷ ಸೆಲ್ ಅಧಿಕಾರಿಗಳು ನಿನ್ನೆ ಬಂಧಿಸಿದ್ದಾರೆ.
ಬಂಧಿತ ಆರೋಪಿಯನ್ನು ಅಬ್ದುಲ್ಲಾ ದಾನಿಶ್ ಎಂದು ಗುರುತಿಸಲಾಗಿದೆ. ದೇಶದ್ರೋಹದ ಪ್ರಕರಣದಲ್ಲಿ ಆರೋಪಿಯಾಗಿ ಕಳೆದ 19 ವರ್ಷಗಳಿಂದ ಪರಾರಿಯಾಗಿದ್ದ ಈತನನ್ನು ಜಾಕಿರ್ ನಗರದಿಂದ ಪೊಲೀಸರು ನಿನ್ನೆ ವಶಕ್ಕೆ ಪಡೆದುಕೊಂಡಿದ್ದಾರೆ. ಆರೋಪಿ ನವದೆಹಲಿಯಲ್ಲೇ ಇರುವುದಕ್ಕೆ ಸಂಬಂಧಿಸಿದಂತೆ ಖಚಿತ ಸಾಕ್ಷ್ಯಗಳನ್ನು ಕಲೆ ಹಾಕಿದ ಪೊಲೀಸರು ಕೊನೆಗೂ ಆತನನ್ನು ವಶಕ್ಕೆ ಪಡೆಯುವಲ್ಲಿ ಯಶಸ್ವಿಯಾಗಿದ್ದಾರೆ.
ಸಿಮಿ ಸಂಘಟನೆಯನ್ನು 2001 ರಲ್ಲಿ ದೇಶದಲ್ಲಿ ನಿಷೇಧ ಮಾಡಲಾಗಿತ್ತು. ಆ ಸಂದರ್ಭದಲ್ಲಿ ಆರೋಪಿ ದಾನಿಶ್ ಪೊಲೀಸರಿಗೆ ಸಿಗದೆ ಪರಾರಿಯಾಗಿದ್ದ. ಆ ಸಂದರ್ಭದಲ್ಲಿ ಸಂಘಟನೆಯ ಅನೇಕ ಆರೋಪಿಗಳನ್ನು ಪೊಲೀಸರು ಬಂಧಿಸಿದ್ದರು. ಅದರೊಂದಿಗೆ ಪ್ರಚೋದನೆ ನೀಡುವಂತಹ ಸಾಹಿತ್ಯ, ಇನ್ನಿತರ ವಸ್ತುಗಳನ್ನು ಸಹ ವಶಕ್ಕೆ ತೆಗೆದುಕೊಳ್ಳಲಿಗಿತ್ತು. ಆ ಸಂದರ್ಭದಲ್ಲಿ ತಪ್ಪಿಸಿಕೊಂಡಿದ್ದ ಸಿಮಿ ಸದಸ್ಯ ಇದೀಗ ಪೊಲೀಸರ ಅತಿಥಿಯಾಗಿದ್ದಾನೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.