ಕ್ಯಾಲಿಫೋರ್ನಿಯಾ: ಕಳೆದ ವಾರ ಸಂಭವಿಸಿದ ಕಾಲ್ಗಿಚ್ಚು ಕ್ಯಾಲಿಫೋರ್ನಿಯಾದಲ್ಲಿ ಇನ್ನೂ ನಿಯಂತ್ರಣಕ್ಕೆ ಬಾರದ ಕಾರಣ ಅಲ್ಲಿ ತುರ್ತು ಪರಿಸ್ಥಿತಿಯನ್ನು ಘೋಷಿಸಲಾಗಿದೆ.
ಈಗಾಗಲೇ ಕಾಲ್ಗಿಚ್ಚು ರಾಜಧಾನಿ ಸಾಕ್ರಮೆಂಟೋವರೆಗೆ ವ್ಯಾಪಿಸಿದ್ದು, 54 ಸಾವಿರ ಪ್ರದೇಶವನ್ನು ಸುಟ್ಟು ಭಸ್ಮ ಮಾಡಿದೆ. ಈ ಪ್ರದೇಶದಲ್ಲಿನ 12 ಸಾವಿರ ಜನರನ್ನು ಸುರಕ್ಷಿತ ಪ್ರದೇಶಕ್ಕೆ ಸ್ಥಳಾಂತರ ಮಾಡಿ ತಾತ್ಕಲಿಕ ಶಿಬಿರಗಳಲ್ಲಿ ನೆಲೆ ಕಲ್ಪಿಸಲಾಗಿದೆ.
ಬೆಂಕಿಯ ಕೆನ್ನಾಲಿಗೆಗೆ 15ಕ್ಕೂ ಅಧಿಕ ಕಟ್ಟಡಗಳು, 30ಕ್ಕೂ ಹೆಚ್ಚು ಮನೆಗಳು ಭಸ್ಮವಾಗಿದೆ. 6 ಸಾವಿರ ಸಿಬ್ಬಂದಿಗಳು ಬೆಂಕಿ ನಂದಿಸುವ ಕಾಯಕದಲ್ಲಿ ನಿರತರಾಗಿದ್ದಾರೆ. ಆದರೂ ಕಾಲ್ಗಿಚ್ಚನ್ನು ನಿಯಂತ್ರಿಸಲು ಸಾಧ್ಯವಾಗುತ್ತಿಲ್ಲ. ಹೀಗಾಗಿ ತುರ್ತು ಪರಿಸ್ಥಿತಿ ಘೋಷಿಸಲಾಗಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.