ನವದೆಹಲಿ: ನೂತನ ಕೃಷಿ ಮಸೂದೆಗಳ ಬಗ್ಗೆ ಜನರಲ್ಲಿ ಅರಿವು ಮೂಡಿಸುವ ಸಲುವಾಗಿ ಬಿಜೆಪಿ ದೇಶಾದ್ಯಂತ ಬೃಹತ್ ಅಭಿಯಾನವನ್ನು ಆಯೋಜಿಸಿದೆ. 700 ಪತ್ರಿಕಾಗೋಷ್ಠಿಗಳು ಮತ್ತು 100 ರೈತ ಸಭೆಗಳನ್ನು ಯೋಜಿಸಲಾಗಿದೆ ಎಂದು ಪಕ್ಷದ ಮೂಲಗಳು ತಿಳಿಸಿವೆ.
ಕ್ಯಾಬಿನೆಟ್ ಮಂತ್ರಿಗಳು ಕೂಡ ಈ ಸಂವಹನ ಅಭಿಯಾನದಲ್ಲಿ ಪಾಲ್ಗೊಳ್ಳಲಿದ್ದಾರೆ ಎಂದು ಬಿಜೆಪಿ ಮೂಲಗಳು ತಿಳಿಸಿವೆ. ಕೃಷಿ ಮಸೂದೆಗಳ ಬಗ್ಗೆ ರೈತರಲ್ಲಿ ಮೂಡಿರುವ ಗೊಂದಲ ನಿವಾರಿಸಲು ಈ ಸಂದರ್ಭದಲ್ಲಿ ಪ್ರಯತ್ನ ನಡೆಸಲಾಗುತ್ತದೆ.
ಕೃಷಿ ಮಸೂದೆಗಳ ಬಗ್ಗೆ ಮೂಡಿರುವ ಪ್ರಶ್ನೆಗಳಿಗೆ ಉತ್ತರವನ್ನು ನೀಡುವ, ಜನರ ಕಳವಳವನ್ನು ದೂರ ಮಾಡುವ ಸಲುವಾಗಿ ಪತ್ರಿಕಾಗೋಷ್ಠಿಗಳನ್ನು ಮತ್ತು ರೈತ ಸಭೆಗಳನ್ನು ಆಯೋಜಿಸಲಾಗುತ್ತಿದೆ ಎಂದು ಬಿಜೆಪಿ ಹೇಳಿದೆ.
ಕೃಷಿ ಮಸೂದೆಗಳನ್ನು ವಿರೋಧಿ ರಾಷ್ಟ್ರ ರಾಜಧಾನಿಯಲ್ಲಿ ರೈತರ ಪ್ರತಿಭಟನೆ 16 ದಿನಕ್ಕೆ ಕಾಲಿಟ್ಟಿದೆ. ಈಗಾಗಲೇ ಕೇಂದ್ರ ಮತ್ತು ರೈತ ಮುಖಂಡರ ನಡುವೆ ಹಲವು ಸುತ್ತಿನ ಸಭೆ ನಡೆದಿದ್ದು, ಯಾವುದೂ ಫಲಪ್ರದವಾಗಿಲ್ಲ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.