ಮಂಗಳೂರು: ದೇಶದಲ್ಲೇ ಮೊದಲ ಬಾರಿಗೆ ದಂತ ವೈದ್ಯಕೀಯ ಸಂಶೋಧನಾ ಪ್ರಯೋಗಾಲಯ ಮಂಗಳೂರಿನ ಮೇರಿಹಿಲ್ನಲ್ಲಿ ಸ್ಥಾಪನೆಯಾಗುತ್ತಿರುವ ರಾಜೀವ್ ಗಾಂಧಿ ಆರೋಗ್ಯ ವಿವಿಯ ಪ್ರಾದೇಶಿಕ ಕೇಂದ್ರದಲ್ಲಿ ಕಾರ್ಯಾರಂಭ ಮಾಡಲಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಭಾರತದಲ್ಲಿ 313 ಮತ್ತು ರಾಜ್ಯದಲ್ಲಿ 44 ದಂತ ವೈದ್ಯಕೀಯ ಕಾಲೇಜುಗಳು ಕಾರ್ಯ ನಿರ್ವಹಿಸುತ್ತಿವೆ. ಆದರೆ ಈ ಕ್ಷೇತ್ರಕ್ಕೆ ಸಂಬಂಧಿಸಿದಂತೆ ಯಾವುದೇ ಪ್ರಯೋಗಾಲಯಗಳಿರಲಿಲ್ಲ. ಸದ್ಯ ರಾಜೀವ್ ಗಾಂಧಿ ವಿವಿ ಈ ಪ್ರತ್ಯೇಕ ಸಂಶೋಧನಾ ಪ್ರಯೋಗಾಲಯ ಕೇಂದ್ರ ಸ್ಥಾಪಿಸಲು ಯೋಜನೆ ರೂಪಿಸಿದೆ.
ಈ ಪ್ರಯೋಗಾಲಯದಲ್ಲಿ ಹಲ್ಲಿನ ಶುಚಿತ್ವಕ್ಕೆ ಬಳಕೆ ಮಾಡುವ ಪೇಸ್ಟ್, ಬ್ರಷ್, ಹಲ್ಲಿಗೆ ಹಾಕುವ ಲೋಹದ ಸರಿಗೆ, ಹಲ್ಲಿಗೆ ಬಳಸುವ ಸಿಮೆಂಟ್ ಮೊದಲಾದವುಗಳನ್ನು ಒಳಗೊಂಡಂತೆ ದಂತಕ್ಕೆ ಸಂಬಂಧಿಸಿದಂತೆ ಇರುವ ಎಲ್ಲಾ ವಸ್ತುಗಳನ್ನು ಪ್ರಯೋಗಕ್ಕೆ ಒಳಪಡಿಸಿ, ಅದು ಸುರಕ್ಷಿತವೇ ಎಂದು ಪರೀಕ್ಷೆ ನಡೆಸಲಾಗುತ್ತದೆ. ಜೊತೆಗೆ ಆ ಉತ್ಪನ್ನಗಳನ್ನು ಬಳಸುವುದರಿಂದ ಯಾವುದೇ ರೀತಿಯ ತೊಂದರೆಯಾಗುವುದಿಲ್ಲ ಎಂದು ತಿಳಿದು ಬಂದ ಮೇಲೆ ಪ್ರಯೋಗಾಲಯ ಅಧಿಕೃತ ಸರ್ಟಿಫಿಕೇಟ್ ನೀಡಲಿದೆ ಎಂದು ಮೂಲಗಳು ತಿಳಿಸಿವೆ.
ಪ್ರಸ್ತುತ ನಮ್ಮಲ್ಲಿ ದಂತ ವೈದ್ಯಕೀಯ ಪ್ರಯೋಗಕ್ಕೆ ಸಂಬಂಧಿಸಿದಂತೆ ಏಕ ವ್ಯವಸ್ಥೆ ಇಲ್ಲವಾಗಿದ್ದು, ಈ ಹಿನ್ನೆಲೆಯಲ್ಲಿ ಪ್ರತ್ಯೇಕ ಪ್ರಯೋಗಾಲಯಗಳನ್ನು ಅವಲಂಬಿಸಬೇಕಾಗಿದೆ. ಸದ್ಯ ಮಂಗಳೂರಿನಲ್ಲಿ ನಿರ್ಮಾಣ ಮಾಡಲು ಮುಂದಾಗಿರುವ ಈ ಪ್ರಯೋಗಾಲಯದಲ್ಲಿ ಈ ಎಲ್ಲಾ ವ್ಯವಸ್ಥೆಗಳನ್ನು ಒಳಗೊಂಡಂತೆ ನಿರ್ಮಾಣ ಮಾಡಲಾಗುತ್ತದೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ. ಸುಮಾರು 5 ಕೋಟಿ ರೂ. ವೆಚ್ಚದಲ್ಲಿ ಎಲೆಕ್ಟ್ರಾನ್ ಮೈಕ್ರೋಸ್ಕೋಪ್ ಸಹಿತ ಅತ್ಯಾಧುನಿಕ ವ್ಯವಸ್ಥೆಯನ್ನು ಈ ಪ್ರಯೋಗಾಲಯ ಒಳಗೊಂಡಿರಲಿದೆ. ಈ ಪ್ರಯೋಗಾಲಯ 2022 .ವೇಳೆಯಲ್ಲಿ ಕಾರ್ಯಾರಂಭ ಮಾಡಲಿದೆ ಎಂದು ಸಂಬಂಧಪಟ್ಟ ಮೂಲಗಳು ಮಾಹಿತಿ ನೀಡಿವೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.