ನವದೆಹಲಿ: ಪಂಜಾಬ್ನ ಅಟ್ಟಾರಿ ಗಡಿಯಲ್ಲಿ ಗಡಿ ಭದ್ರತಾ ಪಡೆ (ಬಿಎಸ್ಎಫ್) ಇಬ್ಬರು ಒಳನುಸುಳುಕೋರರನ್ನು ಬುಧವಾರ ತಡರಾತ್ರಿ ಸಂಹಾರ ಮಾಡಿದೆ.
ಹತ್ಯೆಗೀಡಾದ ಒಳನುಸುಳುಕೋರರಿಂದ ಭದ್ರತಾ ಪಡೆಗಳು ಅಪಾರ ಪ್ರಮಾಣದ ಶಸ್ತ್ರಾಸ್ತ್ರ ಮತ್ತು ಮದ್ದುಗುಂಡುಗಳನ್ನು ವಶಪಡಿಸಿಕೊಂಡಿವೆ.
ಮುಂಜಾನೆ 2: 30 ರ ಸುಮಾರಿಗೆ ಅಟ್ಟಾರಿ ಮುಂಭಾಗದಲ್ಲಿ ಶಸ್ತ್ರಸಜ್ಜಿತ ಒಳನುಸುಳುಕೋರರನ್ನು ಗುಂಡಿಕ್ಕಿ ಕೊಲ್ಲಲಾಗಿದೆ ಎಂದು ಅಧಿಕೃತ ಮೂಲಗಳು ತಿಳಿಸಿವೆ. ಅಟ್ಟಾರಿಯ ರಾಜತಾಲ್ ಪ್ರದೇಶದಲ್ಲಿ ಈ ಎನ್ಕೌಂಟರ್ ನಡೆದಿದೆ.
ಈ ಪ್ರದೇಶದಲ್ಲಿ ಬಿಎಸ್ಎಫ್ ಶೋಧ ಕಾರ್ಯಾಚರಣೆಯನ್ನು ಪ್ರಾರಂಭಿಸಿದ್ದು ದಟ್ಟವಾದ ಮಂಜು ಈ ಪ್ರದೇಶವನ್ನು ಆವರಿಸಿರುವ ಕಾರಣ ಕಾರ್ಯಾಚರಣೆ ಕ್ಲಿಷ್ಟಕರವಾಗಿದೆ ಎಂದು ಮೂಲಗಳು ತಿಳಿಸಿವೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.