ನವದೆಹಲಿ: ಕಳೆದ 24 ಗಂಟೆಗಳಲ್ಲಿ 25 ಸಾವಿರಕ್ಕೂ ಹೆಚ್ಚು ಕೋವಿಡ್ ರೋಗಿಗಳು ಚೇತರಿಸಿಕೊಂಡಿರುವುದರಿಂದ ದೇಶದ ಕೋವಿಡ್-19 ಚೇತರಿಕೆ ಪ್ರಮಾಣವು ಶೇ.95.53 ಕ್ಕೆ ಸುಧಾರಿಸಿದೆ. ಒಟ್ಟು ಚೇತರಿಕೆಗಳ ಸಂಖ್ಯೆ 96 ಲಕ್ಷದ ಆರು ಸಾವಿರಕ್ಕೆ ಏರಿದೆ ಎಂದು ಆರೋಗ್ಯ ಸಚಿವಾಲಯ ತಿಳಿಸಿದೆ. ಪ್ರಸ್ತುತ ದೇಶದ ಒಟ್ಟು ಪಾಸಿಟಿವ್ ಪ್ರಕರಣಗಳಿಗೆ ಹೋಲಿಸಿದರೆ ಕೇವಲ 3.02 ಶೇಕಡಾ ಮಾತ್ರ ಹೊಸ ಪ್ರಕರಣಗಳು ಸಿಗುತ್ತಿವೆ.
ಪ್ರಸ್ತುತ, ದೇಶದಲ್ಲಿ ಒಟ್ಟು ಸಕ್ರಿಯ ಪ್ರಕರಣಗಳ ಸಂಖ್ಯೆ ಸುಮಾರು ಮೂರು ಲಕ್ಷದ ಮೂರು ಸಾವಿರ ಇದೆ. ಜಾಗತಿಕವಾಗಿ ಮಿಲಿಯನ್ ಜನಸಂಖ್ಯೆಗೆ ಭಾರತವು ಅತಿ ಕಡಿಮೆ ಕೋವಿಡ್ 19 ಸಾವುಗಳನ್ನು ಹೊಂದಿದೆ. ಮಿಲಿಯನ್ ಜನಸಂಖ್ಯೆಗೆ ಭಾರತ ಕೋವಿಡ್ ರೋಗಿಗಳ ಸಾವು ಕೇವಲ 105 ಆಗಿದೆ.
ಪರೀಕ್ಷೆ, ಮುಂಚಿತವಾಗಿ ಗುರುತಿಸುವಿಕೆ, ಸಮಯೋಚಿತ ಐಸೋಲೇಷನ್ ಮತ್ತು ಕ್ಷಿಪ್ರವಾಗಿ ಆಸ್ಪತ್ರೆಗೆ ದಾಖಲು ಮತ್ತು ಸ್ಟ್ಯಾಂಡರ್ಡ್ ಟ್ರೀಟ್ಮೆಂಟ್ ಪ್ರೊಟೊಕಾಲ್ ಸೇರಿದಂತೆ ಕೇಂದ್ರೀಕೃತ ಕ್ರಮಗಳಿಂದ ದೈನಂದಿನ ಸಾವುನೋವು 400 ಕ್ಕಿಂತ ಕಡಿಮೆಯಾಗಿದೆ ಎಂದು ಸಚಿವಾಲಯ ತಿಳಿಸಿದೆ.
ಕಳೆದ 24 ಗಂಟೆಗಳಲ್ಲಿ, 24 ಸಾವಿರ 337 ಹೊಸ ಪ್ರಕರಣಗಳು ದಾಖಲಾಗಿದ್ದು, ದೇಶದ ಒಟ್ಟು ಸಕಾರಾತ್ಮಕ ಪ್ರಕರಣಗಳ ಸಂಖ್ಯೆಯನ್ನು ಒಂದು ಕೋಟಿ 55 ಸಾವಿರಕ್ಕೆ ತೆಗೆದುಕೊಂಡು ಹೋಗಿದೆ ಎಂದು ವರದಿಯಾಗಿದೆ. ಶ್ರೇಣೀಕೃತ ಟೆಸ್ಟ್, ಟ್ರ್ಯಾಕ್ ಮತ್ತು ಟ್ರೀಟ್ ವಿಧಾನವನ್ನು ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸುವುದರಿಂದ ಹೆಚ್ಚಿನ ಚೇತರಿಕೆ ಮತ್ತು ಕಡಿಮೆ ಸಾವು ಸಂಭವಿಸಿದೆ ಎಂದು ಸಚಿವಾಲಯ ಹೇಳಿದೆ. ಪ್ರಸ್ತುತ, ಭಾರತದ ಪ್ರಕರಣಗಳ ಸಾವಿನ ಪ್ರಮಾಣವು ಶೇಕಡಾ 1.45 ರಷ್ಟಿದೆ, ಇದು ಜಾಗತಿಕವಾಗಿ ಅತ್ಯಂತ ಕಡಿಮೆ ಪ್ರಮಾಣದಲ್ಲಿದೆ. ಕಳೆದ 24 ಗಂಟೆಗಳಲ್ಲಿ 333 ಸಾವುಗಳು ಸಂಭವಿಸಿದ್ದು, ಒಟ್ಟು ಒಂದು ಲಕ್ಷ 45 ಸಾವಿರ 810 ಕ್ಕೆ ತಲುಪಿದೆ ಎಂದು ವರದಿಯಾಗಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.