ನವದೆಹಲಿ: ಜಮ್ಮು ಮತ್ತು ಕಾಶ್ಮೀರದ ಎಲ್ಲಾ ನಿವಾಸಿಗಳನ್ನು ಆಯುಷ್ಮಾನ್ ಭಾರತ್ ಯೋಜನೆಯ ವ್ಯಾಪ್ತಿಗೆ ಒಳಪಡಿಸುವ ಉದ್ದೇಶದಿಂದ ಪ್ರಧಾನಿ ನರೇಂದ್ರ ಮೋದಿಯವರು ನಾಳೆ ಮಧ್ಯಾಹ್ನ 12 ಗಂಟೆಗೆ ವಿಡಿಯೋ ಕಾನ್ಫರೆನ್ಸಿಂಗ್ ಮೂಲಕ ಆಯುಷ್ಮಾನ್ ಭಾರತ್ ಪಿಎಂ-ಜಯ್ ಸೇಹತ್ ಅನ್ನು ಪ್ರಾರಂಭಿಸಲಿದ್ದಾರೆ.
ಈ ಯೋಜನೆಯು ಯುನಿವರ್ಸಲ್ ಹೆಲ್ತ್ ಕವರೇಜ್ ಅನ್ನು ಖಚಿತಪಡಿಸುತ್ತದೆ ಮತ್ತು ತುರ್ತು ಆರೋಗ್ಯ ಪರಿಸ್ಥಿತಿಯಲ್ಲಿ ಹಣಕಾಸು ನೆರವು ಒದಗಿಸುತ್ತದೆ. ಎಲ್ಲಾ ವ್ಯಕ್ತಿಗಳು ಮತ್ತು ಸಮುದಾಯಗಳಿಗೆ ಗುಣಮಟ್ಟದ ಮತ್ತು ಕೈಗೆಟುಕುವ ಅಗತ್ಯ ಆರೋಗ್ಯ ಸೇವೆಗಳನ್ನು ಖಾತ್ರಿಪಡಿಸುತ್ತದೆ.
ಯೋಜನೆಗೆ ಚಾಲನೆ ನೀಡುವ ಸಂದರ್ಭದಲ್ಲಿ ಗೃಹ ಸಚಿವ ಅಮಿತ್ ಶಾ ಮತ್ತು ಜಮ್ಮು ಮತ್ತು ಕಾಶ್ಮೀರದ ಲೆಫ್ಟಿನೆಂಟ್ ಗವರ್ನರ್ ಮನೋಜ್ ಸಿನ್ಹಾ ಉಪಸ್ಥಿತರಿರಲಿದ್ದಾರೆ ಎಂದು ಮೂಲಗಳು ತಿಳಿಸಿವೆ.
ಈ ಯೋಜನೆಯು ಜಮ್ಮು ಮತ್ತು ಕಾಶ್ಮೀರದ ಎಲ್ಲಾ ನಿವಾಸಿಗಳಿಗೆ ಉಚಿತವಾಗಿ ವಿಮಾ ರಕ್ಷಣೆಯನ್ನು ಒದಗಿಸುತ್ತದೆ. ಇದು ಪ್ರತಿ ಕುಟುಂಬಕ್ಕೆ ಐದು ಲಕ್ಷ ರೂಪಾಯಿಗಳವರೆಗೆ ಆರ್ಥಿಕ ರಕ್ಷಣೆಯನ್ನು ಒದಗಿಸುತ್ತದೆ. ಇದು 15 ಲಕ್ಷ ಹೆಚ್ಚುವರಿ ಕುಟುಂಬಗಳಿಗೆ PM-JAY ಕಾರ್ಯಾಚರಣೆಯ ವಿಸ್ತರಣೆಯನ್ನು ಒದಗಿಸುತ್ತದೆ. ಈ ಯೋಜನೆ PM-JAY ನೊಂದಿಗೆ ಒಮ್ಮುಖವಾಗಿ ವಿಮಾ ಕ್ರಮದಲ್ಲಿ ಕಾರ್ಯನಿರ್ವಹಿಸುತ್ತದೆ. ಯೋಜನೆಯ ಪ್ರಯೋಜನಗಳನ್ನು ದೇಶಾದ್ಯಂತ ಪೋರ್ಟಬಲ್ ಮಾಡಲಾಗುವುದು. PM-JAY ಯೋಜನೆಯಡಿಯಲ್ಲಿ ಎಂಪನೇಲ್ ಮಾಡಿದ ಆಸ್ಪತ್ರೆಗಳು ಈ ಯೋಜನೆಯಡಿಯಲ್ಲಿ ಸೇವೆಗಳನ್ನು ಒದಗಿಸುತ್ತವೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.