ಬೆಂಗಳೂರು: ಬೆಂಗಳೂರಿನಲ್ಲಿ ನಡೆಯುತ್ತಿರುವ ರಾಷ್ಟ್ರೀಯ ಕಾರ್ಯಕಾರಿಣಿಯ ಎರಡನೇ ದಿನವಾದ ಇಂದು ಬಿಜೆಪಿ ಭೂಸ್ವಾಧೀನ ಮಸೂದೆಯ ಜಾರಿಯ ಬಗ್ಗೆ ರೂಪಿಸಬೇಕಾದ ಕಾರ್ಯತಂತ್ರಗಳ ಬಗ್ಗೆ ಹೆಚ್ಚಿನ ಗಮನ ನೀಡಲಿದೆ. ವಿರೋಧ ಪಕ್ಷಗಳು ಒಗ್ಗಟ್ಟಿನೊಂದಿಗೆ ಈ ಮಸೂದೆ ರಾಜ್ಯಸಭೆಯಲ್ಲಿ ಅಂಗೀಕಾರವಾಗುವುದನ್ನು ತಡೆದಿವೆ.
ಅಲ್ಲದೇ ಅಂತಾರಾಷ್ಟ್ರೀಯ ವಿಷಯ ಮತ್ತು ಭಾರತದ ಆಂತರಿಕ ವಿಷಯಗಳ ಬಗ್ಗೆ ಇಂದಿನ ಸಭೆಯಲ್ಲಿ ಪ್ರಮುಖವಾಗಿ ಚರ್ಚೆ ನಡೆಯಲಿದೆ.
ಸರ್ಕಾರದ ಭೂ ಸುಗ್ರೀವಾಜ್ಞೆಯ ವಿರುದ್ಧ ಸಮರ ಸಾರಿರುವ ಕಾಂಗ್ರೆಸನ್ನು ಹತ್ತಿಕ್ಕಲು ಕೈಗೊಳ್ಳಬೇಕಾದ ಕ್ರಮಗಳ ಬಗ್ಗೆ ಪವರ್ ಪಾಯಿಂಟ್ ಪ್ರಸಂಟೇಶನ್ ಮತ್ತು ಬುಕ್ಲೇಟ್ಗಳನ್ನು ಬಳಸಿ ವಿವರಣೆ ನೀಡಲಿದೆ. ಭೂಸ್ವಾಧೀನ ಮಸೂದೆಗೆ ಅಂಟಿರುವ ರೈತ ವಿರೋಧಿ ಎಂಬ ಹಣೆಪಟ್ಟಿಯನ್ನು ಕಳಚುವ ಸಲುವಾಗಿ ಸರ್ಕಾರ ಸರಣಿ ಜಾಗೃತಿ ಸಮಾವೇಶಗಳನ್ನು, ಸಾರ್ವಜನಿಕ ಸಂಪರ್ಕ ಸಭೆಗಳನ್ನು ನಡೆಸಲು ಉದ್ದೇಶಿಸಲಿದೆ. ಈ ಬಗ್ಗೆ ಇಂದಿನ ಸಭೆಯಲ್ಲಿ ಚರ್ಚಿತವಾಗಲಿದೆ ಎನ್ನಲಾಗಿದೆ.
ಇಂದು ಕಾರ್ಯಕಾರಿಣಿಯ ಕೊನೆಯ ದಿನವಾಗಿದೆ. ಸಭೆ ಮುಗಿದ ಬಳಿಕ ಗಣ್ಯರುಗಳು ಕೆಲ ಪ್ರವಾಸಿ ತಾಣಗಳಿಗೆ ಭೇಟಿ ನೀಡಲಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.