ಬೆಂಗಳೂರು: ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮವು ಪ್ರಯಾಣಿಕರ ಪ್ರಯಾಣ ಸುಗಮಗೊಳಿಸಲು ಸಹಾಯವಾಣಿ ವ್ಯವಸ್ಥೆಯನ್ನು ಒದಗಿಸುತ್ತಿದೆ.
ನಿಗಮವು ಪ್ರಯಾಣಿಕರಿಗಾಗಿ ಒದಗಿಸಿರುವ ಕಾಲ್ಸೆಂಟರ್ ಸಹಾಯವಾಣಿ ಸಂಖ್ಯೆ ೯೪೪೯೫೯೬೬೬೬ (9449596666) ಬದಲಾಯಿಸಿ, ನೂತನ ಸಹಾಯವಾಣಿ ಸಂಖ್ಯೆ ೦೮೦-೨೬೨೫೨೬೨೫ (080-26252625) ನ್ನು ಜನವರಿ 1 ರಿಂದ ಜಾರಿಗೊಳಿಸಲಿದೆ ಎಂದು ಸಂಸ್ಥೆಯ ಅಧಿಕೃತ ಮೂಲಗಳು ತಿಳಿಸಿವೆ.
ಈ ಸಹಾಯವಾಣಿಗೆ ಕರೆ ಮಾಡುವ ಮೂಲಕ ಪ್ರಯಾಣಿಕರು ತಮಗೆ ಬೇಕಾದ ಮಾಹಿತಿಗಳನ್ನು ಪಡೆದುಕೊಳ್ಳಬಹುದಾಗಿದೆ ಎಂದು ಸಂಸ್ಥೆಯ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ. ಪ್ರಯಾಣಿಕರ ಪ್ರಯಾಣವನ್ನು, ಆ ವಿಚಾರಕ್ಕೆ ಸಂಬಂಧಿಸಿದಂತೆ ಇರುವ ಮಾಹಿತಿಯನ್ನು ಸರಳ ಮತ್ತು ಸುಲಭವಾಗಿ ಪಡೆದುಕೊಳ್ಳುವುದಕ್ಕೆ ಸಾಧಾಯವಾಗಿಸುವ ನಿಟ್ಟಿನಲ್ಲಿ ಈ ಸಹಾಯವಾಣಿಯನ್ನು ಆರಂಭಿಸಲಾಗಿದೆ. ಸಾರ್ವಜನಿಕರು ಇದರ ಸದುಪಯೋಗ ಪಡೆದುಕೊಳ್ಳುವಂತೆಯೂ ಸಂಸ್ಥೆ ಮನವಿ ಮಾಡಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.