ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ವಿವಿಧ ಇಲಾಖೆಗಳಲ್ಲಿ ಸರಕಾರಿ ನೌಕರರ ಕೊರತೆ ಇದ್ದು, ಜನಸಾಮಾನ್ಯರ ಕೆಲಸ ಕಾರ್ಯಗಳು ಕುಂಠಿತವಾಗುತ್ತಿದೆ. ಪಂಚಾಯತ್ರಾಜ್ ಕಂದಾಯ ಮುಂತಾದ ಇಲಾಖೆಗಳಲ್ಲಿ ಬಹಳಷ್ಟು ಸರಕಾರಿ ನೌಕರರ ಸ್ಥಾನಗಳು ಖಾಲಿ ಇದ್ದು ಅಭಿವೃದ್ಧಿ ಕಾರ್ಯಗಳು ಕುಂಠಿತವಾಗಿದೆ. ರಾಜ್ಯ ಸರಕಾರ ಈ ರೀತಿ ಜನರ ಮೂಲಭೂತ ಆವಶ್ಯಕತೆಗಳ ಬಗ್ಗೆ ಯಾವುದೇ ಕಾಳಜಿ ವಹಿಸುತ್ತಿಲ್ಲ. ಸರಕಾರಿ ಇಲಾಖೆಗಳೇ ನಿಷ್ಕ್ರಿಯವಾಗಿರುವುದು ಖಂಡನೀಯ ಎಂದು ವಿಧಾನ ಪರಿಷತ್ ಮಾಜಿ ಸದಸ್ಯ ಮೋನಪ್ಪ ಭಂಡಾರಿ ಅವರು ಪತ್ರದ ಮೂಲಕ ತಿಳಿಸಿದ್ದಾರೆ.
ಶೀಘ್ರವೇ ಸರಕಾರಿ ಇಲಾಖೆಯ್ಲಲಿರು ಖಾಲಿ ಹುದ್ದೆಗಳಿಗೆ ನೇಮಕಾತಿ ಪ್ರಕ್ರಿಯೆಗಳನ್ನು ಮಾಡಬೇಕಾಗಿ ಅವರು ರಾಜ್ಯ ಸರಕಾರಕ್ಕೆ ಒತ್ತಾಯಿಸಿದರು. ದಕ್ಷಿಣ ಕನ್ನಡ ಜಿಲ್ಲೆಗಳ ನಾಲ್ಕು ಮಂದಿ ಸಚಿವರು ಈ ಬಗ್ಗೆ ಸರಕಾರ ಕ್ರಮ ಕೈಗೊಂಡಿದೆ ಎಂಬುದಾಗಿ ಸುಳ್ಳು ಹೇಳಿಕೆಗಳನ್ನು ನೀಡಿ ಜನರ ಹಾದಿ ತಪ್ಪಿಸುವಂತಹ ಕೆಲಸವನ್ನು ಮಾಡುತ್ತಿರುವುದು ಖೇದಕರ ಎಂದು ಆರೋಪಿಸಿದರು. ಈ ಇಲಾಖೆಗಳಲ್ಲಿ ಸರಕಾರಿ ನೌಕರರ ಕೊರತೆ ಇದ್ದು ಸಚಿವ ರಮಾನಾಥ ರೈ ಅವರು ಯಾವುದೇ ಕ್ರಮ ಕೈಗೋಂಡಿಲ್ಲ ಎಂದರು.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.