ನವದೆಹಲಿ: ಕೇಂದ್ರ ಸರ್ಕಾರ ಮತ್ತು ಪ್ರತಿಭಟನಾ ನಿರತ ರೈತ ಸಂಘದ ಮುಖಂಡರು ಬುಧವಾರ ಸ್ಥಗಿತಗೊಂಡ ಸಂವಾದವನ್ನು ಪುನರಾರಂಭಿಸಲಿದ್ದಾರೆ ಎಂದು ಮೂಲಗಳು ತಿಳಿಸಿವೆ.
ಬಿಕ್ಕಟ್ಟು ಕೊನೆಗೊಳಿಸಲು ಸರ್ಕಾರ ಮತ್ತು ರೈತರ ನಡುವಿನ ಆರನೇ ಸುತ್ತಿನ ಮಾತುಕತೆ ಇದಾಗಿದೆ. ಕೇಂದ್ರವೇ ಪ್ರತಿಭಟನೆ ನಡೆಸುತ್ತಿರುವ 40 ರೈತ ಸಂಘಗಳಿಗೆ ಪತ್ರ ಬರೆದು ಮಾತುಕತೆಗೆ ಆಹ್ವಾನಿಸಿದೆ.
ಈ ಸಭೆಯಲ್ಲೂ ರೈತ ಸಂಘಟನೆಗಳು ಮೂರು ಹೊಸ ಕೃಷಿ ಕಾನೂನುಗಳನ್ನು ರದ್ದುಗೊಳಿಸುವ ತಮ್ಮ ಬೇಡಿಕೆಗೆ ಅಂಟಿಕೊಳ್ಳುವ ಮತ್ತು ಎಂಎಸ್ಪಿಗೆ ಕಾನೂನು ಖಾತರಿ ನೀಡುವಂತೆ ಒತ್ತಾಯಿಸುವ ನಿರೀಕ್ಷೆ ಇದೆ.
ಕೃಷಿ ಕಾನೂನುಗಳ ಹೊರತಾಗಿ, ಎಂಎಸ್ಪಿ ಮತ್ತು ಗಾಳಿಯ ಗುಣಮಟ್ಟ ಮತ್ತು ವಿದ್ಯುತ್ಗೆ ಸಂಬಂಧಿಸಿದ ಕಾನೂನುಗಳ ಕುರಿತು ಚರ್ಚೆ ನಡೆಯಲಿದೆ.
ಸ್ಪಷ್ಟ ಉದ್ದೇಶದಿಂದ ಮತ್ತು ಮುಕ್ತ ಮನಸ್ಸಿನಿಂದ ರೈತರು ಎತ್ತುವ ಎಲ್ಲ ಸಂಬಂಧಿತ ವಿಷಯಗಳ ಬಗ್ಗೆ ತಾರ್ಕಿಕ ಪರಿಹಾರವನ್ನು ಕಂಡುಹಿಡಿಯಲು ಬದ್ಧವಾಗಿದ್ದೇವೆ ಎಂದು ಸರ್ಕಾರ ಪುನರುಚ್ಚರಿಸಿದೆ. ಡಿಸೆಂಬರ್ 29 ರಂದು ಚರ್ಚೆ ನಡೆಸಲು ರೈತ ಸಂಘಗಳು ಮಾಡಿದ ಪ್ರಸ್ತಾವನೆಯ ಹಿನ್ನೆಲೆಯಲ್ಲಿ ಮಾತುಕತೆ ಪುನರಾರಂಭಕ್ಕೆ ಆಹ್ವಾನ ನೀಡಲಾಗಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.