ನವದೆಹಲಿ: ಕಳೆದ ವರ್ಷ ನರೇಂದ್ರ ಮೋದಿ ಸರ್ಕಾರ ಜಾರಿಗೆ ತಂದ ಮೂರು ಕೃಷಿ ಕಾನೂನುಗಳ ವಿರುದ್ಧ ನಡೆಯುತ್ತಿರುವ ರೈತ ಪ್ರತಿಭಟನೆಯು ದೇಶದ ಆರ್ಥಿಕತೆಗೆ ಡಿಸೆಂಬರ್ ತಿಂಗಳಿನಲ್ಲಿ 70,000 ಕೋಟಿ ರೂ. ನಷ್ಟ ಉಂಟಾಗಿದೆ ಎಂದು ಪಿಎಚ್ಡಿ ಚೇಂಬರ್ ಆಫ್ ಕಾಮರ್ಸ್ ಅಂಡ್ ಇಂಡಸ್ಟ್ರಿ (ಪಿಎಚ್ಡಿಸಿಸಿಐ) ಹೇಳಿದೆ.
ಅದರ ಪ್ರಕಾರ, ಡಿಸೆಂಬರ್ ತ್ರೈಮಾಸಿಕದಲ್ಲಿ ಸರಬರಾಜು ಸರಪಳಿಗಳಲ್ಲಿನ ಅಡೆತಡೆಗಳಿಂದಾಗಿ ವಿಶೇಷವಾಗಿ ಪಂಜಾಬ್ ಮತ್ತು ಹರಿಯಾಣ ರಾಜ್ಯಗಳು ಮತ್ತು ರಾಷ್ಟ್ರ ರಾಜಧಾನಿಯ ಗಡಿ ಪ್ರದೇಶಗಳಲ್ಲಿ ಭಾರಿ ಆರ್ಥಿಕ ನಷ್ಟ ಸಂಭವಿಸಿದೆ.
ಆಹಾರ ಸಂಸ್ಕರಣೆ, ಹತ್ತಿ ಜವಳಿ, ವ್ಯಾಪಾರ ಮತ್ತು ಪ್ರವಾಸೋದ್ಯಮ ಸೇರಿದಂತೆ ಹಲವು ಕ್ಷೇತ್ರಗಳ ಮೇಲೆ ಈ ಪ್ರತಿಭಟನೆ ತೀವ್ರವಾಗಿ ಪರಿಣಾಮ ಬೀರುತ್ತಿದೆ.
ಪಿಎಚ್ಡಿಸಿಸಿಐ ಅಧ್ಯಕ್ಷ ಸಂಜಯ್ ಅಗರ್ವಾಲ್ ಅವರು ಹೇಳುವಂತೆ, “ಇದುವರೆಗಿನ 36 ದಿನಗಳ ಕೃಷಿ ಹೋರಾಟವು 70,000 ಕೋಟಿ ರೂ. ಗಳಿಗಿಂತ ಹೆಚ್ಚಿನ ಆರ್ಥಿಕ ನಷ್ಟಕ್ಕೆ ಕಾರಣವಾಗಿದೆ. ಪೂರೈಕೆ ಸರಪಳಿಗಳಲ್ಲಿನ ಅಡ್ಡಿ ಮತ್ತು ದಿನನಿತ್ಯದ ಆರ್ಥಿಕ ಚಟುವಟಿಕೆಗಳಲ್ಲಿ ಅಡೆತಡೆ ಪ್ರಗತಿಪರ ರಾಜ್ಯಗಳಾದ ಪಂಜಾಬ್ ಮತ್ತು ಹರಿಯಾಣ ಮತ್ತು ರಾಷ್ಟ್ರ ರಾಜಧಾನಿ ದೆಹಲಿಯ ಗಡಿ ಪ್ರದೇಶಗಳಲ್ಲಿ ದೊಡ್ಡ ಮಟ್ಟದ ನಷ್ಟವನ್ನು ಉಂಟು ಮಾಡಿದೆ”.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.