ಬೆಂಗಳೂರು: ಕೊರೋನಾ ಓಡಿಸಿ, ವಿದ್ಯಾರ್ಥಿಗಳನ್ನು ಸುರಕ್ಷಿತವಾಗಿ ಓದಿಸೋಣ ಎಂದು ಸಚಿವ ಡಾ. ಕೆ. ಸುಧಾಕರ್ ಅವರು ತಿಳಿಸಿದ್ದಾರೆ.
ಶಾಲೆಗಳಲ್ಲಿ ವಿದ್ಯಾರ್ಥಿಗಳನ್ನು ಸ್ವಾಗತಿಸಲು ಮತ್ತು ಅವರ ಬಗ್ಗೆ ಕಾಳಜಿ ವಹಿಸಲು ಶಿಕ್ಷಕರು ಅಗತ್ಯ ಕ್ರಮ ಕೈಗೊಂಡಿದ್ದಾರೆ. ಆದ್ದರಿಂದ ಮಕ್ಕಳನ್ನು ಶಾಲೆಗೆ ಕಳುಹಿಸುವುದಕ್ಕೆ ಸಂಬಂಧಿಸಿದಂತೆ ಯಾವುದೇ ಪೋಷಕರು ಭಯ ಪಡುವ, ಆತಂಕಕ್ಕೆ ಒಳಗಾಗುವ ಅಗತ್ಯವಿಲ್ಲ ಎಂದು ಸಚಿವರು ವಿದ್ಯಾರ್ಥಿಗಳ ಜೊತೆಗೆ ಪೋಷಕರಲ್ಲಿಯೂ ಧೈರ್ಯ ತುಂಬಿದ್ದಾರೆ.
ಮಕ್ಕಳ ಶೈಕ್ಷಣಿಕ ವಿಚಾರ ಮತ್ತು ಆರೋಗ್ಯದ ದೃಷ್ಟಿಕೋನ ಈ ಎರಡು ವಿಚಾರಗಳನ್ನು ಸಹ ದೃಷ್ಟಿಯಲ್ಲಿಟ್ಟುಕೊಂಡು, ಪೂರಕ ವ್ಯವಸ್ಥೆಗಳನ್ನು ಸರ್ಕಾರ ಮಾಡಿದೆ. ಆ ಬಳಿಕವೇ ಇಂದಿನಿಂದ ಶಾಲಾರಂಭ ಮಾಡಿದೆ. ವಿದ್ಯಾರ್ಥಿಗಳು ಮತ್ತು ಶಿಕ್ಷಕರ ಆರೋಗ್ಯ ಕಾಳಜಿಗೆ ಸಂಬಂಧಿಸಿದಂತೆ ಸೂಕ್ತ ಮುನ್ನೆಚ್ಚರಿಕಾ ಕ್ರಮಗಳನ್ನು ತೆಗೆದುಕೊಂಡೇ ಸರ್ಕಾರ ಶಾಲಾರಂಭ ಮಾಡಿದೆ ಎಂದು ಸುಧಾಕರ್ ಮಾಹಿತಿ ನೀಡಿದ್ದಾರೆ.
ಕಳೆದ ಬಾರಿ ಕೊರೋನಾ ಸಂಕಷ್ಟದ ನಡುವೆ ಎಸ್ಎಸ್ಎಲ್ಸಿ ಪರೀಕ್ಷೆ ನಡೆಸುವಾಗಲೂ ಇದೇ ರೀತಿಯ ಗೊಂದಲಗಳು ಜನರಲ್ಲಿದ್ದವು. ಆದರೆ ಸರ್ಕಾರ ಎಲ್ಲಾ ರೀತಿಯ ಅಗತ್ಯ ಮುಂಜಾಗ್ರತಾ ಕ್ರಮಗಳನ್ನು ಕೈಗೊಂಡು ಯಶಸ್ವಿಯಾಗಿ ಪರೀಕ್ಷೆ ನಡೆಸಿತ್ತು. ಸದ್ಯ ಶಾಲಾರಂಭಕ್ಕೆ ಸಂಬಂಧಿಸಿದಂತೆಯೂ ಸರ್ಕಾರ ಅಗತ್ಯ ಎಲ್ಲಾ ರೀತಿಯ ಮುಂಜಾಗ್ರತಾ ಕ್ರಮಗಳನ್ನು ತೆಗೆದುಕೊಂಡಿದೆ. ಯಾವುದೇ ಆತಂಕವಿಲ್ಲದೆ ಮಕ್ಕಳನ್ನು ಶಾಲೆಗೆ ಕಳುಹಿಸಬಹುದು ಎಂದು ಸಚಿವರು ಕಿವಿಮಾತು ಹೇಳಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.