ಕಾರ್ಕಳ : ಜನವರಿಯಲ್ಲಿ ನಡೆದ ಮಹಾಮಸ್ತಕಾಭಿಷೇಕ ಸಮಯದಲ್ಲಿ ಕಾರ್ಕಳ ಬಂಗ್ಲೆಗುಡ್ಡೆ ಯಿಂದ ಕಾರ್ಕಳ ಪೇಟೆಯ ತನಕ ರಸ್ತೆಗೆ ಮಾಡಿದ ಡಾಮರೀಕರಣ ಕಾರ್ಯ ಕಳಪೆಮಟ್ಟದ್ದಾಗಿದೆ ಎಂದು ಕಾರ್ಕಳ ಪುರಸಭೆಯ ಸದಸ್ಯ ಮೊಹಮ್ಮದ್ ಶರೀಫ್ ಆರೋಪಿಸಿದ್ದಾರೆ.
ಬಂಗ್ಲೆ ಗುಡ್ಡೆಯಿಂದ ಕಾರ್ಕಳ ಪೇಟೆ ರಸ್ತೆಗೆ ಹಾಕಿದ ಡಾಮರು ಕಿತ್ತುಹೋಗಿದ್ದು ಕಸ್ತೆಗಳಲ್ಲಿ ಗುಂಡಿ ಬೀಳುತ್ತಿದೆ. ಇದರಿಂದ ರಸ್ತೆಯಲ್ಲಿ ವಾಹನ ಸಂಚಾರಕ್ಕೆ ತೊಂದರೆಯಾಗುತ್ತಿದ್ದು ಈಗ ವಾಹನ ಸಂಚಾರವನ್ನೇ ನಿಲ್ಲಿಸಲಾಗಿದೆ ಎಂದು ಅವರು ಹೇಳಿದ್ದಾರೆ.
ಮಹಾಮಸ್ತಕಾಭಿಷೇಕ ಕಾರ್ಯಕ್ರಮವಾಗಿ ವರುಷ ಕಳೆಯುದರೊಳಗೆ ಈ ಸ್ಥಿತಿ ಬಂದೊದಗಿದರೆ ಮುಂದೇನು? ಸಾರ್ವಜನಿಕರ ತೆರಿಗೆ ಹಣ ಪೋಲಾಗಿದ್ದು ಇದು ಕಳಪೆ ಕಾಮಗಾರಿಗೆ ಹಿಡಿದ ಕನ್ನಡಿ ಎಂದು ಹೇಳಿದ್ದಾರೆ
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.