ಮೈಸೂರು: ಮಹಾನಗರದಲ್ಲಿ ನಡೆದ ಅಯೋಧ್ಯೆಯ ಶ್ರೀರಾಮ ಮಂದಿರ ನಿರ್ಮಾಣ ನಿಧಿ ಸಮರ್ಪಣಾ ಅಭಿಯಾನಕ್ಕೆ ಸಂಬಂಧಿಸಿದಂತೆ ಕಾರ್ಯಾಲಯ ಉದ್ಘಾಟನಾ ಕಾರ್ಯಕ್ರಮ ನಡೆದಿದ್ದು, ಈ ಸಮಾರಂಭವು ದಿವ್ಯಾಂಗ ಬಾಲಕನೊಬ್ಬನ ಪ್ರೇರಣಾದಾಯಿ ಕಾರ್ಯವೊಂದಕ್ಕೆ ಸಾಕ್ಷಿಯಾಯಿತು.
ಮೈಸೂರಿನ ಮಹದೇವಪುರ ಬಡಾವಣೆಯ ದಿವ್ಯಾಂಗ ಬಾಲಕ ಮಂಜನಾಥ್ ತಾನು ಗೋಲಕದಲ್ಲಿ ಕೂಡಿಟ್ಟಿದ್ದ ಹಣವನ್ನು ಶ್ರೀರಾಮ ಮಂದಿರ ನಿರ್ಮಾಣ ನಿಧಿ ಸಮರ್ಪಣಾ ಅಭಿಯಾನ ತಂಡಕ್ಕೆ ಸಮರ್ಪಣೆ ಮಾಡುವ ಮೂಲಕ ಇತರರಿಗೂ ಮಾದರಿಯಾಗಿದ್ದಾನೆ. ಈ ಮೊತ್ತವನ್ನು ರಾಷ್ಟ್ರೀಯ ಸ್ವಯಂಸೇವಕ ಸಂಘದ ಕರ್ನಾಟಕ ದಕ್ಷಿಣ ಪ್ರಾಂತ ಕಾರ್ಯಕಾರಿಣಿ ಸದಸ್ಯರು ಮತ್ತು ಅಭಿಯಾನ ಟ್ರಸ್ಟಿನ ಪ್ರಾಂತ (ಕರ್ನಾಟಕ ದಕ್ಷಿಣ ಮತ್ತು ಉತ್ತರ) ಅಧ್ಯಕ್ಷ ಮಾ. ವೆಂಕಟರಾಮ ಅವರು ಸ್ವೀಕರಿಸಿದರು.
ಈ ವೇಳೆ ಆರ್ಎಸ್ಎಸ್ನ ಮೈಸೂರು ವಿಭಾಗ ಸಹ ಕಾರ್ಯವಾಹ ತಿಲಕ್ ಕುಮಾರ್, ಗೋಕುಲಂ ನಗರದ ಸಂಘಚಾಲಕ ಜಯಪ್ರಕಾಶ್ ಮೊದಲಾದವರು ಉಪಸ್ಥಿತರಿದ್ದರು.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.