ಮಂಗಳೂರು: ವಿದ್ಯಾಥಿಗಳನ್ನು ಅಲರ್ಜಿಯಿಂದ ರಕ್ಷಣೆ ಮಾಡುವ ನಿಟ್ಟಿನಲ್ಲಿ, ಅವರಲ್ಲಿನ ರೋಗ ನಿರೋಧಕ ಶಕ್ತಿಯನ್ನು ಹೆಚ್ಚಿಸುವ ಹಿನ್ನೆಲೆಯಲ್ಲಿ ಪ್ರತಿನಿತ್ಯ ವಿದ್ಯಾಥಿಗಳಿಗೆ ಬೆಳಗ್ಗಿನ ಬಿಡುವಿನ ವೇಳೆಯಲ್ಲಿ ಗಿಡಮೂಲಿಕೆಗಳಿಂದ ತಯಾರಿಸಲ್ಪಟ್ಟ ಕಷಾಯ ವಿತರಣೆಯನ್ನು ನಗರದ ಶಕ್ತಿ ವಿದ್ಯಾಕೇಂದ್ರ ಮಾಡುತ್ತಿದೆ.
ಸದ್ಯ ಎಲ್ಲೆಲ್ಲೂ ಕೊರೋನಾ ಭೀತಿ ಆವರಿಸಿದೆ. ಇಂತಹ ಸಂದರ್ಭದಲ್ಲಿ ವಿದ್ಯಾಥಿಗಳಿಗೆ ವೈರಸ್ ಹರಡದಂತೆ ಎಚ್ಚರ ವಹಿಸಲು ವಿವಿಧ ಕ್ರಮಗಳನ್ನು ತೆಗೆದುಕೊಳ್ಳಲಾಗುತ್ತಿದೆ. ಈ ಹಿನ್ನೆಯಲ್ಲಿ ಸಾಮಾನ್ಯರಿಗೂ ಸುಲಭವಾಗಿ ಕೈಗೆ ಸಿಗುವಂತಹ ಕೈತೋಟಗಳಲ್ಲಿನ ಗಿಡಮೂಲಿಕೆಗಳನ್ನು ಬಳಕೆ ಮಾಡಿ ಕಷಾಯ ತಯಾರಿಸಿ ವಿದ್ಯಾಥಿಗಳಿಗೆ ನೀಡಲಾಗುತ್ತಿದೆ. ಇದು ಆರೋಗ್ಯದ ದೃಷ್ಟಿಯಿಂದಲೂ ಹೆಚ್ಚು ಉತ್ತಮವಾಗಿದೆ ಎಂದು ಶಕ್ತಿ ನಗರದ ಶಕ್ತಿ ವಿದ್ಯಾಸಂಸ್ಥೆಯ ಆಡಳಿತ ಮಂಡಳಿ ಮಾಹಿತಿ ನೀಡಿದೆ. ಈ ಶಾಲೆಯಲ್ಲಿ ಸುಮಾರು 360 ವಿದ್ಯಾಥಿಗಳು ಅಧ್ಯಯನ ನಡೆಸುತ್ತಿದ್ದು, ಅವರಲ್ಲಿ 196 ಮಂದಿ ವಿದ್ಯಾಸಂಸ್ಥೆಯ ಹಾಸ್ಟೆಲ್ನಲ್ಲಿಯೇ ಉಳಿದುಕೊಂಡಿದ್ದಾರೆ. ಅವರ ಆರೋಗ್ಯದ ದೃಷ್ಟಿಯಿಂದ ದೇಹದ ರೋಗ ನಿರೋಧಕ ಶಕ್ತಿಯನ್ನು ಹೆಚ್ಚಿಸುವ ಕಷಾಯಗಳನ್ನು ವಿತರಣೆ ಮಾಡಲಾಗುತ್ತಿದೆ ಎಂದ ವಿದ್ಯಾಸಂಸ್ಥೆಯ ಮೂಲಗಳು ಮಾಹಿತಿ ನೀಡಿವೆ.
ಈ ಸಂಬಂಧ ಮಾತನಾಡಿರುವ ಸಂಸ್ಥೆಯ ಆಡಳಿತಾಧಿಕಾರಿ ಕೆ. ಸಿ. ನಾಯ್ಕ್ ಮಾತನಾಡಿದ್ದು, ಮನುಷ್ಯನ ಆರೋಗ್ಯವರ್ಧನೆಗೆ ಸಂಬಂಧಿಸಿದಂತೆ ಪ್ರಕೃತಿಯೇ ಹಲವು ಕೊಡುಗೆಗಳನ್ನು ತನ್ನೊಳಗೆ ಹೊತ್ತುಕೊಂಡಿದೆ. ಕೊರೋನಾ ಸಂಬಂಧಿ ವೈರಸ್ಗಳು ಹರಡುವುದನ್ನು ತಡೆಯುವ ನಿಟ್ಟಿನಲ್ಲಿಯೂ ಪ್ರಕೃತಿಯಲ್ಲಿ ಸಿಗುವ ಅದೆಷ್ಟೋ ಗಿಡಮೂಲಿಕೆಗಳು ಪರಿಹಾರವಾಗಲು ಸಾಧ್ಯವಿದೆ. ಕೊರೋನಾಗೆ ಸೂಕ್ತ ಲಸಿಕೆ ದೊರಕುವಲ್ಲಿಯವರೆಗೆ, ನಮ್ಮ ದೇಹದ ರೋಗ ನಿರೋಧಕ ಶಕ್ತಿಯನ್ನು ಹೆಚ್ಚಿಸುವತ್ತ ನಾವು ಗಮನ ಹರಿಸಬೇಕಾಗಿದೆ ಎಂದು ಅವರು ತಿಳಿಸಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.