ಕಾಪು: ಉತ್ತರ ಪ್ರದೇಶದ ಅಯೋಧ್ಯೆಯಲ್ಲಿ ಭಾರತದ ಬಹುಕೋಟಿ ಜನರ ಅರಾಧ್ಯ ದೇವರು ಪ್ರಭು ಶ್ರೀರಾಮನ ಮಂದಿರ ನಿರ್ಮಾಣವಾಗಲಿದ್ದು, ಈ ಹಿನ್ನೆಲೆಯಲ್ಲಿ ಸಾಮೂಹಿಕ ನಿಧಿ ಸಮರ್ಪಣೆಗೆ ಮುಕ್ತ ಅವಕಾಶವನ್ನು ಒದಗಿಸಲಾಗಿದೆ. ನಿಧಿ ಸಮರ್ಪಣೆ ಮತ್ತು ಮನೆ ಮನೆಗೆ ತೆರಳಿ ಈ ಸಂಬಂಧ ಪ್ರಚಾರ ಕಾರ್ಯ ಕೈಗೊಳ್ಳುವಲ್ಲಿ ಎಲ್ಲರೂ ಮುಕ್ತವಾಗಿ ಭಾಗವಹಿಸಬಹುದಾಗಿದೆ ಎಂದು ರಾಷ್ಟ್ರೀಯ ಸ್ವಯಂಸೇವಕ ಸಂಘದ ದಕ್ಷಿಣ ಮಧ್ಯ ಕ್ಷೇತ್ರ ಕಾರ್ಯಕಾರಿಣಿ ಸದಸ್ಯ ಡಾ. ಪ್ರಭಾಕರ್ ಭಟ್ ಕಲ್ಲಡ್ಕ ಅವರು ತಿಳಿಸಿದ್ದಾರೆ.
ಅವರು ಕಾಪು ತಾಲೂಕಿನ ಅಯೋಧ್ಯೆ ಶ್ರೀ ರಾಮ ಜನ್ಮಭೂಮಿ ಮಂದಿರ ನಿರ್ಮಾಣ ನಿಧಿ ಸಮರ್ಪಣಾ ಮಹಾ ಅಭಿಯಾನದ ಕಾರ್ಯಾಲಯವನ್ನು ಉದ್ಘಾಟಿಸಿ ಮಾತನಾಡಿದರು.
ದೇಶದೆಲ್ಲೆಡೆ ರಾಮ ಮಂದಿರ ನಿರ್ಮಾಣ ಕಾರ್ಯಕ್ಕೆ ಸಂಬಂಧಿಸಿದಂತೆ ನಿಧಿ ಸಮರ್ಪಣಾ ಅಭಿಯಾನ ಜ. 15 ರಿಂದ ಫೆ. 27 ರ ವರೆಗೆ ನಡೆಯಲಿದೆ. ಜ. 17 ರಂದು ಸಾಮೂಹಿಕ ನಿಧಿ ಸಮರ್ಪಣೆ ನಡೆಯಲಿದೆ. ಈ ಕಾರ್ಯಕ್ಕೆ ಸಂಘ ಪರಿವಾರವೂ ಸೇರಿದಂತೆ ಇತರ ಸಂಘ ಸಂಸ್ಥೆಗಳೂ ಕೈಜೋಡಿಸಲಿವೆ ಎಂದು ಅವರು ಮಾಹಿತಿ ನೀಡಿದ್ದಾರೆ.
ಕಾರ್ಯಕ್ರಮದಲ್ಲಿ ರಾಮ ಜನ್ಮ ಭೂಮಿಗೆ ಸಂಬಂಧಿಸಿದಂತೆ ಕರ ಸೇವೆಯಲ್ಲಿ ಭಾಗವಹಿಸಿದ್ದ ಕಾಪು ಶಾಸಕ ಲಾಲಾಜಿ ಮೆಂಡನ್, ಪಾಂಡುರಂಗ ಪ್ರಭು, ವಸಂತ ದೇವಾಡಿಗ, ಮಾಧವ ಸುವರ್ಣ, ರಮೇಶ್ ಪ್ರಭು ಮಟ್ಟಾರು, ವಾಸುದೇವ ಶಾನುಭೋಗ್ ಪಾಂಗಾಳ, ಸುಂದರ ಪ್ರಭು ಶಿರ್ವ, ದಿನೇಶ್ ಪಾಟ್ಕರ್ ಮಟ್ಟಾರು, ಕೃಷ್ಣಮೂರ್ತಿ ಪಾಟ್ಕರ್ ಬಂಟಕಲ್ಲು, ಶ್ರೀಪತಿ ಕಾಮತ್ ಶಿರ್ವ, ಸದಾನಂದ ದೇವಾಡಿಗ ಉಚ್ಚಿಲ ಮೊದಲಾದವರನ್ನು ಸನ್ಮಾನಿಸಲಾಯಿತು.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.