ಬೆಂಗಳೂರು: ಕೊರೋನಾ ಲಸಿಕೆಗೆ ಸಂಬಂಧಿಸಿದಂತೆ ವಿಪಕ್ಷಗಳು ತಪ್ಪುಮಾಹಿತಿಗಳನ್ನು ಹರಡುತ್ತಿದ್ದು, ಆ ಮೂಲಕ ಜನರ ಜೀವನದ ಜೊತೆಗೆ ಚೆಲ್ಲಾಟವಾಡುತ್ತಿದೆ ಎಂದು ಸಂಸದ ತೇಜಸ್ವಿ ಸೂರ್ಯ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.
ಕೊರೋನಾ ಲಸಿಕೆಗೆ ಸಂಬಂಧಿಸಿದಂತೆ ಪಾಲಿಕೆಯ ಅಧಿಕಾರಿಗಳ ಜೊತೆಗೆ ಚರ್ಚೆ ನಡೆಸಿ ಬಳಿಕ ಮಾತನಾಡಿದ ಅವರು, ಕೊರೋನಾ ಸೋಂಕು ತಡೆಗೆ ವಿತರಣೆ ಮಾಡುವ ಲಸಿಕೆಯನ್ನು ಬಿಜೆಪಿ ಲಸಿಕೆ ಎಂದು ಪ್ರಚಾರ ಮಾಡುವ ಕಾರ್ಯದಲ್ಲಿ ವಿಪಕ್ಷಗಳು ತೊಡಗಿಸಿಕೊಂಡಿವೆ. ಅಲ್ಲದೆ ಕೊರೋನಾ ಲಸಿಕೆಗೆ ಸಂಬಂಧಿಸಿದಂತೆ ಜನರನ್ನು ತಪ್ಪು ದಾರಿಗೆ ಎಳೆಯುವ ಪ್ರಯತ್ನವನ್ನು ಮಾಡುತ್ತಿವೆ. ಜವಾಬ್ದಾರಿಯುತ ಸ್ಥಾನದಲ್ಲಿರುವವರು ಇಂತಹ ಬೇಜವಾಬ್ದಾರಿಯ ಹೇಳಿಕೆಗಳನ್ನು ನೀಡುವ ಮೂಲಕ ಸಾರ್ವಜನಿಕರಲ್ಲಿ ಆತಂಕ ಸೃಷ್ಟಿಸುತ್ತಿದ್ದಾರೆ ಎಂದು ಉತ್ತರ ಪ್ರದೇಶದ ರಾಜಕಾರಣಿ ಅಖಿಲೇಶ್ ಯಾದವ್ ಅವರ ಹೇಳಿಕೆ ಸೇರಿದಂತೆ ಕೊರೋನಾ ಲಸಿಕೆಗೆ ಸಂಬಂಧಿಸಿದಂತೆ ತಪ್ಪು ಬಿತ್ತಿರುವ ರಾಜಕಾರಣಿಗಳ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಕೊರೋನಾ ಲಸಿಕೆಗೆ ಸಂಬಂಧಿಸಿದಂತೆ ರಾಜ್ಯದ ಯಾವುದೇ ರಾಜಕಾರಣಿಗಳೂ ಬೇಕಾಬಿಟ್ಟಿ ಹೇಳಿಕೆಗಳನ್ನು ನೀಡಿಲ್ಲ ಎಂಬುದು ಸಂತಸದ ವಿಚಾರ. ಕೊರೋನಾ ಲಸಿಕೆ ಬಂದಲ್ಲಿ ಲಕ್ಷಾಂತರ ಜನರ ಜೀವ ಉಳಿಯಲಿದೆ. ಕೊರೋನಾ ಸೋಂಕು ಹರಡುವುದಕ್ಕೂ ಮೊದಲು ಇದ್ದಂತಹ ವಾತಾವರಣ ನಿರ್ಮಾಣವಾಗಲಿದೆ. ಆದ್ದರಿಂದ ವಿನಾ ಕಾರಣ ಸುಳ್ಳುಗಳನ್ನು ಹಬ್ಬಿಸಿ ಜನರಲ್ಲಿ ಮತ್ತಷ್ಟು ಆತಂಕ ಸೃಷ್ಟಿಸದಂತೆ ಎಚ್ಚರ ವಹಿಸುವಂತೆಯೂ ಅವರು ರಾಜ್ಯದ ಎಲ್ಲಾ ರಾಜಕೀಯ ನಾಯಕರಲ್ಲಿ ಮನವಿ ಮಾಡಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.