ಚಿತ್ರದುರ್ಗ: ಅಯೋಧ್ಯೆಯ ಶ್ರೀರಾಮ ಮಂದಿರ ನಿರ್ಮಾಣ ನಿಧಿ ಸಮರ್ಪಣಾ ಅಭಿಯಾದ ಹಿನ್ನೆಯಲ್ಲಿ ಜಿಲ್ಲೆಯಲ್ಲಿಯೂ ನಿಧಿ ಸಮರ್ಪಣಾ ಕಾರ್ಯ ಕೈಗೊಳ್ಳಲಾಗುತ್ತಿದ್ದು, ಇದಕ್ಕೆ ರಾಮ ಭಕ್ತರು ಸಂಪೂರ್ಣ ಸಹಕಾರ ನೀಡಬೇಕು ಎಂದು ಬಜರಂಗದಳದ ಶಿವಮೊಗ್ಗ ವಿಭಾಗ ಸಂಚಾಲಕ ಪ್ರಭುರಂಜನ್ ಅವರು ಮನವಿ ಮಾಡಿದ್ದಾರೆ.
ದೇಶದೆಲ್ಲೆಡೆ ಜ. 15 ರಿಂದ ಫೆ. 5 ರ ವರೆಗೆ ನಿಧಿ ಸಮರ್ಪಣಾ ಕಾರ್ಯ ನಡೆಯಲಿದ್ದು ಜಿಲ್ಲೆಯಲ್ಲಿಯೂ ನಿಧಿ ಸಮರ್ಪಣಾ ನಡೆಯಲಿದೆ. ಜಿಲ್ಲೆಗೆ ಸಂಬಂಧಿಸಿದಂತೆ ಐದು ಜನರ ತಂಡ ಮನೆ ಮನೆಗೆ ಭೇಟಿ ನೀಡಿ ನಿಧಿ ಸಮರ್ಪಣಾ ಕಾರ್ಯವನ್ನು ನಡೆಸಲಿದೆ. ಹೀಗೆ ಸಂಗ್ರಹಿಸಲಾದ ನಿಧಿಯನ್ನು 48 ಗಂಟೆಗಳೊಳಗಾಗಿ ಬ್ಯಾಂಕ್ಗೆ ಜಮೆ ಮಾಡಲಾಗುತ್ತದೆ ಎಂದು ಅವರು ಮಾಹಿತಿ ನೀಡಿದ್ದಾರೆ.
ಹಾಗೆಯೇ ನಿಧಿ ಸಮರ್ಪಣಾ ಅಭಿಯಾನಕ್ಕೆ ಸಂಬಂಧಿಸಿದಂತೆ ಮ್ಯಾರಥಾನ್ ಆಯೋಜನೆ ಮಾಡುವ ನಿಟ್ಟಿನಲ್ಲಿಯೂ ಚಿಂತನೆಗಳು ನಡೆಯುತ್ತಿವೆ. ಜೊತೆಗೆ ಜ. 10 ರಂದು ಹೋಬಳಿ ಮಟ್ಟದ ಕಾರ್ಯಗಾರ ನಡೆಯಲಿದೆ.ಜ.17 ರಂದು ಮಹಿಳಾ ಸಮಾವೇಶ ನಡೆಯಲಿದೆ. ಈ ಸಮಾವೇಶದಲ್ಲಿ ಬಿಜೆಪಿ ನಾಯಕಿ ಮಾಳವಿಕಾ ಅವಿನಾಶ್ ಅವರು ಭಾಗವಹಿಸುವ ಸಾಧ್ಯತೆ ಇದೆ ಎಂದು ಅವರು ಮಾಹಿತಿ ನೀಡಿದ್ದಾರೆ. ನಿಧಿ ಸಮರ್ಪಣಾ ಅಭಿಯಾನದಲ್ಲಿ ಎರಡು ಸಾವಿರಕ್ಕೂ ಅಧಿಕ ಮೊತ್ತ ನೀಡಿದವರಿಗೆ ರಶೀದಿಯನ್ನು ನೀಡಲಾಗುವುದು ಎಂದು ಅವರು ತಿಳಿಸಿದ್ದಾರೆ.
ಈ ಸಂದರ್ಭದಲ್ಲಿ ಅಭಿಯಾನದ ಜಿಲ್ಲಾ ಪ್ರಮುಖ್ ರಾಜ್ ಕುಮಾರ್, ಸಹ ಪ್ರಮುಖ್ ಚಂದ್ರಶೇಖರ್ ಸೇರಿದಂತೆ ಇನ್ನಿತರ ಗಣ್ಯರು ಉಪಸ್ಥಿತರಿದ್ದರು.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.