ಜಿನೆವಾ: ಕೋವಿಡ್ -19 ವೈರಸ್ ಮೂಲದ ಬಗ್ಗೆ ತಿಳಿಯಲು ತಜ್ಞರ ತಂಡಕ್ಕೆ ಪ್ರವೇಶವನ್ನು ವಿಳಂಬ ಮಾಡುತ್ತಿರುವ ಚೀನಾದ ಬಗ್ಗೆ ವಿಶ್ವ ಆರೋಗ್ಯ ಸಂಸ್ಥೆಯ ಮಹಾನಿರ್ದೇಶಕ ಟೆಡ್ರೊಸ್ ಅಧಾನೊಮ್ ಘೆಬ್ರೆಯೆಸಸ್ ಮಂಗಳವಾರ ಅಸಮಾಧಾನ ವ್ಯಕ್ತಪಡಿಸಿದ್ದಾರೆ.
“ಚೀನಾ ಅಧಿಕಾರಿಗಳು ಚೀನಾಕ್ಕೆ ಆಗಮಿಸಲು ಅಗತ್ಯವಾದ ಅನುಮತಿಗಳನ್ನು ಇನ್ನೂ ಅಂತಿಮಗೊಳಿಸಿಲ್ಲ. ಇಬ್ಬರು ಸದಸ್ಯರು ಈಗಾಗಲೇ ತಮ್ಮ ಪ್ರಯಾಣವನ್ನು ಪ್ರಾರಂಭಿಸಿದ್ದಾರೆ ಮತ್ತು ಇತರರು ಕೊನೆಯ ಘಳಿಗೆಯಲ್ಲಿ ಪ್ರಯಾಣಿಸಲು ಸಾಧ್ಯವಾಗಲಿಲ್ಲ ಎಂಬ ಸುದ್ದಿಯಿಂದ ನಾನು ತುಂಬಾ ನಿರಾಶೆಗೊಂಡಿದ್ದೇನೆ” ಎಂದು ಅವರು ಹೇಳಿದ್ದಾರೆ.
ಕೊರೋನಾ ವೈರಸ್ ಮೂಲದ ಬಗ್ಗೆ ಪತ್ತೆ ಹಚ್ಚಲು ಅಂತರರಾಷ್ಟ್ರೀಯ ವೈಜ್ಞಾನಿಕ ತಂಡದ ಸದಸ್ಯರು ತಮ್ಮ ತಾಯ್ನಾಡಿನಿಂದ ಚೀನಾಕ್ಕೆ ಪ್ರಯಾಣಿಸಲು ಪ್ರಾರಂಭಿಸಿದ್ದಾರೆ, ಅದರೆ ಇವರ ಪ್ರವೇಶಕ್ಕೆ ಚೀನಾ ವಿನಾ ಕಾರಣ ವಿಳಂಬ ಮಾಡುತ್ತಿದೆ ಎಂದು ಹೇಳಲಾಗಿದೆ.
ವಿವಿಧ ದೇಶಗಳ ತಜ್ಞರು ಚೀನಾದ ವುಹಾನ್ ನಗರಕ್ಕೆ ಭೇಟಿ ನೀಡುತ್ತಿದ್ದಾರೆ. ಒಂದು ವರ್ಷದ ಹಿಂದೆ ಈ ನಗರದಲ್ಲಿ ಕೊರೋನಾ ವೈರಸ್ ಮೊದಲು ಕಾಣಿಸಿಕೊಂಡಿತ್ತು.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.