ಬೆಂಗಳೂರು: ರಾಜ್ಯದಲ್ಲಿ ಕೊರೋನಾ ಲಾಕ್ಡೌನ್ ಬಳಿಕ ಇದೀಗ ಮತ್ತೆ ಎಸ್ಎಸ್ಎಲ್ಸಿ ಮತ್ತು ದ್ವಿತೀಯ ಪಿಯುಸಿ ತರಗತಿಗಳನ್ನು ಸೂಕ್ತ ಕೊರೋನಾ ಮುಂಜಾಗ್ರತಾ ಕ್ರಮಗಳ ಜೊತೆಗೆ ಆರಂಭ ಮಾಡಲಾಗಿದೆ. ಇದರ ಬೆನ್ನಲ್ಲೇ ಸಂಕ್ರಾಂತಿಯ ಬಳಿಕ ಪದವಿಯ ಪ್ರಥಮ ಮತ್ತು ದ್ವಿತೀಯ ಪದವಿ ಭೌತಿಕ ತರಗತಿಗಳನ್ನು ಆರಂಭ ಮಾಡಲು ಮುಂದಾಗಿರುವುದಾಗಿ ಉಪಮುಖ್ಯಮಂತ್ರಿ ಡಾ. ಅಶ್ವತ್ಥ್ ನಾರಾಯಣ್ ಮಾಹಿತಿ ನೀಡಿದ್ದಾರೆ.
ಈ ವಿಚಾರಕ್ಕೆ ಸಂಬಂಧಿಸಿದಂತೆ ಸರ್ಕಾರಿ ಮತ್ತು ಖಾಸಗಿ ವಲಯದ ಎಲ್ಲಾ ವಿವಿಗಳ ಕುಲಪತಿಗಳು, ಉನ್ನತ ಶಿಕ್ಷಣ ಸೇರಿ, ಶಿಕ್ಷಣಕ್ಕೆ ಸಂಬಂಧಿಸಿದ ಎಲ್ಲಾ ಇಲಾಖೆಗಳ ಅಧಿಕಾರಿಗಳ ಜೊತೆಗೆ ಸಭೆ ನಡೆಸಿದ್ದಾರೆ. ಅಲ್ಲದೆ ಪದವಿ ತರಗತಿಗಳ ಆರಂಭಕ್ಕೆ ಸಂಬಂಧಿಸಿದಂತೆ ವರದಿ ನೀಡುವಂತೆಯೂ ಕುಲಪತಿಗಳಿಗೆ ಸೂಚಿಸಿರುವುದಾಗಿ ಅವರು ತಿಳಿಸಿದ್ದಾರೆ.
ಈ ಸಭೆಯಲ್ಲಿ ಪಾಲ್ಗೊಂಡಿದ್ದ ಎಲ್ಲಾ ಕುಲಪತಿಗಳು, ಅಧಿಕಾರಿಗಳ ಸಲಹೆಗಳನ್ನೂ ಇದೇ ಸಂದರ್ಭದಲ್ಲಿ ಪಡೆಯಲಾಗಿದ್ದು, ಅವರೆಲ್ಲರೂ ನೇರ ತರಗತಿಗಳನ್ನು ಆರಂಭ ಮಾಡುವ ಸರ್ಕಾರದ ಚಿಂತನೆಗೆ ಸಮ್ಮತಿ ಸೂಚಿಸಿದ್ದಾರೆ. ಇದೇ ಸಂದರ್ಭದಲ್ಲಿ ಪರೀಕ್ಷೆಗಳ ಬಗ್ಗೆ ಮತ್ತು ಮುಂದಿನ ಶೈಕ್ಷಣಿಕ ವರ್ಷದ ಬಗ್ಗೆಯೂ ಚರ್ಚೆ ನಡೆಸಲಾಗಿದೆ ಎಂದು ಅಶ್ವತ್ಥ ನಾರಾಯಣ್ ಮಾಹಿತಿ ನೀಡಿದ್ದಾರೆ. ಆನ್ಲೈನ್ ಪರೀಕ್ಷೆಗಳಿಗಿಂತ, ಆಫ್ಲೈನ್ ಪೇಪರ್ ಆಧಾರಿತ ಪರೀಕ್ಷೆಯೇ ಹೆಚ್ಚು ಸೂಕ್ತ ಎಂದು ಸಭೆಯಲ್ಲಿ ಭಾಗವಹಿಸಿದ್ದ ಕುಲಪತಿಗಳು, ಅಧಿಕಾರಿಗಳು ಸಲಹೆ ನೀಡಿದ್ದಾಗಿಯೂ ಅವರು ಇದೇ ಸಂದರ್ಭದಲ್ಲಿ ತಿಳಿಸಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.