ಬೆಂಗಳೂರು: ರಾಜ್ಯದಲ್ಲಿ ಧಾರ್ಮಿಕ ಸ್ಥಳಗಳಲ್ಲಿ ಕಾನೂನು ನಿಯಮಗಳನ್ನು ಉಲ್ಲಂಘನೆ ಮಾಡಿ ಧ್ವನಿವರ್ಧಕಗಳನ್ನು ಬಳಕೆ ಮಾಡುವುದರ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳುವುದಕ್ಕೆ ಕರ್ನಾಟಕ ಮಾಲಿನ್ಯ ನಿಯಂತ್ರಣ ಮಂಡಳಿ ಮತ್ತು ಪೊಲೀಸ್ ಇಲಾಖೆಗೆ ನಿರ್ದೇಶಿಸುವಂತೆ ಹೈಕೋರ್ಟ್ ರಾಜ್ಯ ಸರ್ಕಾರಕ್ಕೆ ಆದೇಶ ನೀಡಿದೆ.
ಈ ಸಂಬಂಧ ಸಾಮಾಜಿಕ ಕಾರ್ಯಕರ್ತ ಗಿರೀಶ್ ಭಾರಧ್ವಾಜ್ ಎಂಬವರು ಸಲ್ಲಿಸಿದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ವಿಚಾರಣೆ ನಡೆಸಿರುವ ಹೈಕೋರ್ಟ್ನ ಮುಖ್ಯ ನ್ಯಾಯಮೂರ್ತಿ ಎ. ಎಸ್. ಒಕಾ ನೇತೃತ್ವದ ವಿಭಾಗೀಯ ಪೀಠ ಈ ಆದೇಶವನ್ನು ಹೊರಡಿಸಿದೆ.
ಈಗಾಗಲೇ ಸುಪ್ರೀಂಕೋರ್ಟ್ ಸಹ ಧ್ವನಿವರ್ಧಕ ಬಳಕೆಯ ವಿರುದ್ಧ ಮಾಲಿನ್ಯ ನಿಯಂತ್ರಣ ಮಂಡಳಿ ಮತ್ತು ಪೊಲೀಸ್ ಇಲಾಖೆ ಕ್ರಮ ಕೈಗೊಳ್ಳುವಂತೆಯೂ ಈ ಹಿಂದೆಯೇ ಆದೇಶ ನೀಡಿದೆ. ಇಂತಹ ಆದೇಶಗಳನ್ನು ಪರಿಗಣನೆಗೆ ತೆಗೆದುಕೊಳ್ಳುವಂತೆಯೂ ಹೈಕೋರ್ಟ್ ಸಲಹೆ ನೀಡಿದೆ. ಶಬ್ದ ಮಾಲಿನ್ಯ ನಿಯಮಗಳನ್ನು ಪಾಲಿಸದೆ ಬೇಕಾಬಿಟ್ಟಿ ವರ್ತಿಸುವುದು ಸಹ ಮಾನವ ಹಕ್ಕುಗಳ ಉಲ್ಲಂಘನೆಯಾಗುತ್ತದೆ. ಆದ್ದರಿಂದ ನಿಯಮಗಳನ್ನು ಗಾಳಿಗೆ ತೂರಿ ಸಾರ್ವಜನಿಕರಿಗೆ ಸಮಸ್ಯೆ, ಕಿರಿಕಿರಿ ಉಂಟುಮಾಡುವವರ ವಿರುದ್ಧ ಕಠಿಣ ಕ್ರಮ ಕೈಗೊಂಡು, ಮೂರು ವಾರಗಳಲ್ಲಿ ಅನುಸರಣಾ ವರದಿ ಸಲ್ಲಿಸಬೇಕು ಎಂದು ಕೋರ್ಟ್ ಸರ್ಕಾರಕ್ಕೆ ತಿಳಿಸಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.