ಮಂಗಳೂರು: ಅಯೋಧ್ಯೆ ಶ್ರೀರಾಮ ಮಂದಿರ ನಿರ್ಮಾಣ ನಿಧಿ ಸಮರ್ಪಣಾ ಅಭಿಯಾನದ ಹಿನ್ನಲೆಯಲ್ಲಿ ಮಂಗಳೂರಿನಲ್ಲಿಂದು ವಿಶ್ವ ಹಿಂದೂ ಪರಿಷದ್ ವತಿಯಿಂದ ಪತ್ರಿಕಾಗೋಷ್ಠಿ ನಡೆಯಿತು.
ಜನವರಿ 15 ರ ಮಕರ ಸಂಕ್ರಮಣದಿಂದ ಆರಂಭವಾಗಿ ಫೆಬ್ರವರಿ 5 ರ ತನಕ ದೇಶದೆಲ್ಲೆಡೆ ನಿಧಿ ಸಮರ್ಪಣಾ ಅಭಿಯಾನ ನಡೆಯಲಿದೆ. ಮಂಗಳೂರು ವಿಭಾಗದಲ್ಲಿಯೂ ಈ ಅಭಿಯಾನವನ್ನು ಯಶಸ್ವಿಗೊಳಿಸುವ ನಿಟ್ಟಿನಲ್ಲಿ ಸಕಲ ಸಿದ್ಧತೆಗಳನ್ನು ಮಾಡುವತ್ತ ಕಾರ್ಯಕರ್ತರು ಚಿತ್ತ ಹರಿಸಿದ್ದಾರೆ. ಮನೆ ಮನೆಗೆ ಭೇಟಿ ನೀಡಿ ನಿಧಿ ಸಮರ್ಪಣಾ ಅಭಿಯಾನ ನಡೆಸಲಿದ್ದು, ಈ ಸಂದರ್ಭದಲ್ಲಿ ಸಾತ್ವಿಕವಾಗಿ ನಿಧಿ ಸಮರ್ಪಣೆ ಮಾಡುವಂತೆಯೂ ಪತ್ರಿಕಾಗೋಷ್ಠಿಯಲ್ಲಿ ಮನವಿ ಮಾಡಲಾಗಿದೆ.
ರಾಮ ಮಂದಿರ ನಿರ್ಮಾಣ ದೇಶದ ಗೌರವದ ಪ್ರತೀಕ. ದೇಶದ ಎಲ್ಲಾ ಜಾತಿ, ಮತ, ಪಂಥಗಳ ಜನರ ಬೆಂಬಲದ ಜೊತೆಗೆ ಈ ಭವ್ಯ ಮಂದಿರ ನಿರ್ಮಾಣವಾಗಲಿದ್ದು, ಇದು ರಾಷ್ಟ್ರ ಮಂದಿರದ ರೂಪ ಪಡೆಯಲಿದೆ. ಅಯೋಧ್ಯೆಯ ಮಂದಿರ ನಿರ್ಮಾಣ ರಾಷ್ಟ್ರೀಯತೆಯ ಪುನರುತ್ಥಾನದ ಸಂಕೇತವಾಗಿದೆ ಎಂದು ವಿಶ್ವ ಹಿಂದೂ ಪರಿಷದ್ ಅಭಿಪ್ರಾಯ ವ್ಯಕ್ತಪಡಿಸಿದೆ.
ವಿಹಿಂಪ ದ. ಪ್ರಾಂತ ಕಾರ್ಯಾಧ್ಯಕ್ಷ ಪ್ರೊ ಎಂ. ಬಿ. ಪುರಾಣಿಕ್, ವಿಹಿಂಪ. ದ. ಪ್ರಾಂತ ಸಹಕಾರ್ಯದರ್ಶಿ ಕೃಷ್ಣಮೂರ್ತಿ, ವಿಹಿಂಪ ಮಂಗಳೂರು ವಿಭಾಗ ಕಾರ್ಯದರ್ಶಿ ಶರಣ್ ಪಂಪ್ವೆಲ್, ವಿಹಿಂಪ ಮಂಗಳೂರು ಜಿಲ್ಲಾಧ್ಯಕ್ಷರು ಗೋಪಾಲ್ ಕುತ್ತಾರ್, ವಿಹಿಂಪ ಮಂಗಳೂರು ಜಿಲ್ಲಾ ಕಾರ್ಯದರ್ಶಿ ಶಿವಾನಂದ್ ಮೆಂಡನ್ ಉಪಸ್ಥಿತರಿದ್ದರು.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.