ನವದೆಹಲಿ: ಈ ವರ್ಷ ಜನವರಿ 26 ರಂದು ಗಣರಾಜ್ಯೋತ್ಸವದ ಮೆರವಣಿಗೆಯ ಸಾಂಸ್ಕೃತಿಕ ಕಾರ್ಯಕ್ರಮದಲ್ಲಿ 321 ಶಾಲಾ ಮಕ್ಕಳು ಮತ್ತು 80 ಜಾನಪದ ಕಲಾವಿದರು ಭಾಗವಹಿಸಲಿದ್ದಾರೆ ಎಂದು ರಕ್ಷಣಾ ಸಚಿವಾಲಯ ತಿಳಿಸಿದೆ.
ದೆಹಲಿಯ ನಾಲ್ಕು ಶಾಲೆಗಳ ಶಾಲಾ ಮಕ್ಕಳು ಮತ್ತು ಕೋಲ್ಕತ್ತಾದ ಪೂರ್ವ ವಲಯ ಸಾಂಸ್ಕೃತಿಕ ಕೇಂದ್ರದ ಜಾನಪದ ಕಲಾವಿದರು ಸಾಂಸ್ಕೃತಿಕ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ.
ಆತ್ಮನಿರ್ಭರ ಭಾರತ: ಸ್ವಾವಲಂಬಿ ಭಾರತದ ದೂರದೃಷ್ಟಿ ಎಂಬ ವಿಷಯದಡಿ ದೆಹಲಿಯ ಮೌಂಟ್ ಅಬು ಪಬ್ಲಿಕ್ ಸ್ಕೂಲ್ ಮತ್ತು ದೆಹಲಿಯ ವಿದ್ಯಾ ಭಾರತಿ ಶಾಲೆಯ ವಿದ್ಯಾರ್ಥಿಗಳು ಕಾರ್ಯಕ್ರಮ ನೀಡಲಿದ್ದಾರೆ. ದೆಹಲಿಯ ಸರ್ಕಾರಿ ಬಾಲಕಿಯರ ಹಿರಿಯ ಮಾಧ್ಯಮಿಕ ಶಾಲೆಯ ವಿದ್ಯಾರ್ಥಿಗಳು ʼಹಮ್ ಫಿಟ್ ತೋ ಇಂಡಿಯಾ ಫಿಟ್ʼ ಎಂಬ ವಿಷಯದ ಕುರಿತು ಕಾರ್ಯಕ್ರಮವನ್ನು ಪ್ರಸ್ತುತಪಡಿಸಲಿದ್ದಾರೆ. ಅಲ್ಲದೆ, ದೆಹಲಿಯ ಡಿಟಿಇಎ ಹಿರಿಯ ಮಾಧ್ಯಮಿಕ ಶಾಲೆಗಳ ವಿದ್ಯಾರ್ಥಿಗಳು ಸಾಂಪ್ರದಾಯಿಕ ಉಡುಪಿನಲ್ಲಿ ತಮಿಳುನಾಡಿನ ಜಾನಪದ ನೃತ್ಯಗಳನ್ನು ಪ್ರದರ್ಶಿಸಲಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.