ಬೆಂಗಳೂರು: ರಾಜ್ಯದಲ್ಲಿ ಬಹುನಿರೀಕ್ಷೆಯ ಸಂಪುಟ ವಿಸ್ತರಣೆ ಆಗಿದ್ದು, ಇದೀಗ ಯಾರಿಗೆ ಯಾವ ಖಾತೆ ಎಂಬ ಪ್ರಶ್ನೆ ಉದ್ಭವವಾಗಿದೆ.
ಈ ಸಂಬಂಧ ಮಾಹಿತಿ ನೀಡಿರುವ ಮುಖ್ಯಮಂತ್ರಿ ಯಡಿಯೂರಪ್ಪ ಅವರು, ನಾಳೆ ರಾಜ್ಯಕ್ಕೆ ಕೇಂದ್ರ ಸಚಿವ ಅಮಿತ್ ಶಾ ಅವರು ಆಗಮಿಸಲಿದ್ದಾರೆ. ಅವರ ಭೇಟಿಯ ಬಳಿಕೆ ನೂತನ ಸಚಿವರಿಗೆ ಖಾತೆ ಹಂಚಿಕೆ ಮಾಡಲಾಗುವುದಾಗಿ ತಿಳಿಸಿದ್ದಾರೆ. ಜ. 16 ಮತ್ತು 17 ರಂದು ಅಮಿತ್ ಶಾ ಕರ್ನಾಟಕದಲ್ಲಿರಲಿದ್ದಾರೆ. ಕೇಂದ್ರ ಸಚಿವ ನಿತಿನ್ ಗಡ್ಕರಿ ಅವರ ಭೇಟಿಯ ಬಳಿಕ ಸಂಪುಟಕ್ಕೆ ಸೇರ್ಪಡೆಯಾದ ಸಚಿವರಿಗೆ ಖಾತೆ ನೀಡುವುದಾಗಿ ಅವರು ತಿಳಿಸಿದ್ದಾರೆ.
ಅಮಿತ್ ಶಾ ಅವರು ಬೆಳಗಾವಿಯಲ್ಲಿ ಜ. 17 ಕ್ಕೆ ನಡೆಯಲಿರುವ ಜನಸೇವಕ ಸಮಾವೇಶದ ಸಮಾರೋಪ ಸಮಾರಂಭದಲ್ಲಿ ಭಾಗವಹಿಸುವ ಹಿನ್ನೆಲೆ ರಾಜ್ಯಕ್ಕೆ ಆಗಮಿಸುತ್ತಿದ್ದಾರೆ. ಜ. 16 ರಂದೇ ರಾಜ್ಯಕ್ಕೆ ಆಗಮಿಸಲಿರುವ ಅವರು ಆ ಬಳಿಕ ವಿವಿಧ ಕಾರ್ಯಕ್ರಮಗಳಲ್ಲಿ ಭಾಗವಹಿಸಲಿದ್ದಾರೆ ಎಂದು ಮೂಲಗಳು ಮಾಹಿತಿ ನೀಡಿವೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.