ಉಡುಪಿ: ನಗರದ ಶ್ರೀಕೃಷ್ಣ ಮಠದಲ್ಲಿ ವಾದೀರಾಜ ಗುರು ಸಾರ್ವಭೌಮರು ವಿಶಿಷ್ಟವಾದ ಪೂಜಾ ಪರ್ಯಾಯ ವ್ಯವಸ್ಥೆಯನ್ನು 2 ವರ್ಷಕ್ಕೆ ಪರಿಷ್ಕರಣೆ ಮಾಡಿ ಐದು ಶತಮಾನಗಳಾದ ಹಿನ್ನೆಲೆಯಲ್ಲಿ, ದ್ವೈವಾರ್ಷಿಕ ಪರ್ಯಾಯ ಪಂಚ ಶತಮಾನೋತ್ಸವ ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿ ಯಡಿಯೂರಪ್ಪ ಅವರು ಪಾಲ್ಗೊಂಡರು.
ಇದೇ ಸಂದರ್ಭದಲ್ಲಿ ಮುಖ್ಯಮಂತ್ರಿ ಯಡಿಯೂರಪ್ಪ ಅವರು ಭಕ್ತಾದಿಗಳಿಗೆ ದರ್ಶನಕ್ಕಾಗಿ ನಿರ್ಮಿಸಿರುವ ನೂತನ ಪಾದಾಚಾರಿ ಮಾರ್ಗವನ್ನು ಉದ್ಘಾಟಿಸಿದರು.
ಕಾರ್ಯಕ್ರಮದಲ್ಲಿ ಶ್ರೀ ಅದಮಾರು ಮಠದ ಈಶಪ್ರಿಯ ತೀರ್ಥರು, ವಿಧಾನಸಭಾಧ್ಯಕ್ಷ ವಿಶ್ವೇಶ್ವರ ಹೆಗಡೆ ಕಾಗೇರಿ, ಸಚಿವ ಕೋಟ ಶ್ರೀನಿವಾಸ ಪೂಜಾರಿ, ಶಾಸಕ ರಘುಪತಿ ಭಟ್ ಮೊದಲಾದವರು ಉಪಸ್ಥಿತರಿದ್ದರು.
ಮುಖ್ಯಮಂತ್ರಿ @BSYBJP ರವರು ಇಂದು ಉಡುಪಿಯ ಶ್ರೀಕೃಷ್ಣ ಮಠದಲ್ಲಿ, ಪರ್ಯಾಯ ಶ್ರೀ ಅದಮಾರು ಮಠದ ವತಿಯಿಂದ ಆಯೋಜಿಸಿದ್ದ ಪರ್ಯಾಯ ಪಂಚ ಶತಮಾನೋತ್ಸವ ಕಾರ್ಯಕ್ರಮದಲ್ಲಿ ಭಾಗವಹಿಸಿ, ಭಕ್ತಾದಿಗಳಿಗೆ ದರ್ಶನಕ್ಕಾಗಿ ನಿರ್ಮಿಸಿರುವ ನೂತನ ಪಾದಚಾರಿ ಮಾರ್ಗವನ್ನು ಉದ್ಘಾಟಿಸಿದರು. (1/2) pic.twitter.com/1Zd1y3gkbY
— CM of Karnataka (@CMofKarnataka) January 18, 2021
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.