ಮಂಗಳೂರು: ನಗರದಲ್ಲಿ ಬಹುನಿರೀಕ್ಷಿತ, ದೂರದೃಷ್ಟಿಯ ಬೃಹತ್ ಯೋಜನೆ ಪ್ಲಾಸ್ಟಿಕ್ ಪಾರ್ಕ್ ಸ್ಥಾಪನೆಗೆ ಕೇಂದ್ರ ಸರ್ಕಾರದ ರಾಸಾಯನಿಕ ಹಾಗೂ ರಸಗೊಬ್ಬರ ಇಲಾಖೆ ಹಸಿರು ನಿಶಾನೆ ತೋರಿಸಿದೆ.
ಈ ಮೂಲಕ ಸಂಸದ ನಳಿನ್ ಕುಮಾರ್ ಕಟೀಲ್ ಅವರ ಬಹುಕಾಲದ ಪ್ರಯತ್ನ ಮತ್ತು ಸಂವಹನ ಯಶಸ್ವಿಯಾಗಿದೆ. ಮಂಗಳೂರಿನಲ್ಲಿ ಪ್ಲಾಸ್ಟಿಕ್ ಪಾರ್ಕ್ ಸ್ಥಾಪನೆ ಮುಂದಿನ ದಿನಗಳಲ್ಲಿ ಅನುಷ್ಠಾನ ಕ್ಕೆ ಬರಲಿದೆ. ಈ ಯೋಜನೆಗೆ ಅನುಮೋದನೆ ಸಿಕ್ಕ ಹಿನ್ನೆಲೆಯಲ್ಲಿ ಸಂಸದರು ಪ್ರಧಾನಿ ನರೇಂದ್ರ ಮೋದಿಯವರಿಗೆ, ಕೇಂದ್ರ ಸಚಿವರಾಗಿದ್ದ ದಿ. ಅನಂತ್ ಕುಮಾರ್ ಅವರಿಗೆ, ಕೇಂದ್ರ ಸಚಿವ ಡಿ.ವಿ ಸದಾನಂದ ಗೌಡ, ಮುಖ್ಯಮಂತ್ರಿ ಯಡಿಯೂರಪ್ಪ ಅವರಿಗೆ ಕೃತಜ್ಞತೆ ಅರ್ಪಿಸಿದ್ದಾರೆ.
ಕೇಂದ್ರದ ಮೇಕ್ ಇನ್ ಇಂಡಿಯಾ ಯೋಜನೆಯ ಭಾಗವಾಗಿರುವ ಪ್ಲಾಸ್ಟಿಕ್ ಪಾರ್ಕ್ ಗಂಜಿಮಠ ಪರಿಸರದಲ್ಲಿ ಅನುಷ್ಟಾನಗೊಳ್ಳಲಿದೆ. ಮುಂದಿನ ದಿನಗಳಲ್ಲಿ ಸ್ಥಳೀಯ ಯುವಕರಿಗೆ ಉದ್ಯೋಗಾವಕಾಶ ಸೃಷ್ಟಿಸುವುದರ ಜೊತೆಗೆ ಜಿಲ್ಲೆಯ ಬೆಳವಣಿಗೆಯ ಹಿನ್ನೆಲೆಯಲ್ಲಿಯೂ ಇದು ಮಹತ್ವ ಪಡೆಯಲಿದೆ. ಈ ಯೋಜನೆಯಿಂದ ಕಳೆದ ಲೋಕಸಭಾ ಚುನಾವಣೆಯಲ್ಲಿ ನಳಿನ್ ಕುಮಾರ್ ಕಟೀಲ್ ಅವರು ನೀಡಿದ ಭರವಸೆ ಈಡೇರಿದಂತಾಗಿದೆ. ಹಾಗೆಯೇ ಸಂಸದರ ಸಾಧನೆಯ ಪರ್ವಕ್ಕೆ ಮತ್ತೊಂದು ಗರಿ ಬಂದಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.