ಬೆಂಗಳೂರು: ರಾಷ್ಟ್ರೀಯ – ಅಂತರರಾಷ್ಟ್ರೀಯ ಪ್ರಯಾಣಿಕರಿಗೆ ಸಂಚಾರ ವ್ಯವಸ್ಥೆಯನ್ನು ಕಲ್ಪಿಸುವಲ್ಲಿ ಮುಖ್ಯ ಪಾತ್ರ ವಹಿಸುವ ವಿಮಾನ ನಿಲ್ದಾಣಗಳ ಸಿಬ್ಬಂದಿಗಳಿಗೆ ಕೊರೋನಾ ಲಸಿಕೆ ನೀಡಲು ರಾಜ್ಯ ಸರ್ಕಾರ, ರಾಜ್ಯ ಆರೋಗ್ಯ ಇಲಾಖೆ ಮುಂದಾಗಿದೆ.
ಈ ಸಂಬಂಧ ಆರೋಗ್ಯ ಇಲಾಖೆ ಆದೇಶ ಹೊರಡಿಸಿದ್ದು, ವಿಮಾನ ನಿಲ್ದಾಣಕ್ಕೆ ಪ್ರತಿನಿತ್ಯ ಸಾವಿರಾರು ಪ್ರಯಾಣಿಕರು ಬಂದು ಹೋಗುತ್ತಾರೆ. ಕೊರೋನಾ ಸೋಂಕು ಹರಡುವ ದೃಷ್ಟಿಯಿಂದ ಇದು ಹೆಚ್ಚು ಅಪಾಯಕಾರಿ ಎಂಬಂತಿದ್ದು, ಸೋಂಕು ಹರಡುವ ವೇಗವೂ ಹೆಚ್ಚಿರಲಿದೆ. ಈ ಹಿನ್ನೆಲೆಯಲ್ಲಿ ವಿಮಾನ ನಿಲ್ದಾಣದಲ್ಲಿ ಕಾರ್ಯ ನಿರ್ವಹಿಸುವ ಸಿಬ್ಬಂದಿಗಳನ್ನು ಫ್ರಂಟ್ಲೈನ್ ವರ್ಕರ್ಸ್ ಎಂದು ಪರಿಗಣಿಸಿ, ಅವರಿಗೆ ಆದ್ಯತೆಯ ಆಧಾರದಲ್ಲಿ ಕೊರೋನಾ ಲಸಿಕೆ ನೀಡಲಾಗುವುದು ಎಂದು ತಿಳಿಸಿದೆ.
ಈ ಹಿನ್ನೆಲೆಯಲ್ಲಿ ಕರ್ನಾಟಕದಲ್ಲಿರುವ ವಿಮಾನ ನಿಲ್ದಾಣಗಳ ಸಿಬ್ಬಂದಿಗಳನ್ನು ಕೊರೋನಾ ಮುಂಚೂಣಿಯ ಕಾರ್ಯಕರ್ತರು ಎಂದು ಪರಿಗಣಿಸಿ, ಅವರಿಗೆ ಲಸಿಕೆ ನೀಡುವಂತೆ ರಾಜ್ಯ ಸರ್ಕಾರವೂ ಸೂಚನೆ ನೀಡಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.