ಮಂಗಳೂರು: ಕರಾವಳಿಯಲ್ಲಿ ಜ. 30 ರಿಂದ ತೊಡಗಿದಂತೆ ಪ್ರಸಿದ್ಧ ಜನಪದ ಕ್ರೀಡೆ ಕಂಬಳವನ್ನು ಆಯೋಜಿಸಲು ಚಿಂತನೆ ನಡೆಸಲಾಗಿದೆ. ಈ ಹಿನ್ನೆಲೆಯಲ್ಲಿ ಎಲ್ಲಾ ರೀತಿಯ ಕೊರೋನಾ ಮುಂಜಾಗ್ರತಾ ಕ್ರಮಗಳನ್ನು ಅನುಸರಿಸಿಕೊಂಡು ಸಿದ್ಧತೆಗಳನ್ನು ನಡೆಸಲಾಗುತ್ತದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಅವರು ತಿಳಿಸಿದ್ದಾರೆ.
ಈ ಬಾರಿ ಕರಾವಳಿಯಲ್ಲಿ ಕಂಬಳ ಆಯೋಜನೆಗೆ ಸಂಬಂಧಿಸಿದಂತೆ ನಡೆಸಲಾದ ಸಭೆಯಲ್ಲಿ ಭಾಗವಹಿಸಿದ ಅವರು, ಪ್ರತಿ ವರ್ಷದಂತೆ ಈ ಬಾರಿಯೂ ಕಂಬಳ ನಡೆಯಲಿದೆ ಎಂದು ತಿಳಿಸಿದ್ದಾರೆ. ಮಾರ್ಚ್ವರೆಗೆ ಕೊರೋನಾ ಹಿನ್ನೆಲೆಯಲ್ಲಿ ಪೂರಕ ಮುನ್ನೆಚ್ಚರಿಕಾ ಕ್ರಮಗಳನ್ನು ಅನುಸರಿಸಿಕೊಂಡು ಕಂಬಳ ಆಯೋಜನೆಗೆ ಅವಕಾಶ ನೀಡಲಾಗುವುದಾಗಿಯೂ ಅವರು ಹೇಳಿದ್ದಾರೆ.
ಸಭೆಯಲ್ಲಿ ಮಾತನಾಡಿದ ಜಿಲ್ಲಾಧಿಕಾರಿ ಕೆ. ವಿ. ರಾಜೇಂದ್ರ ಅವರು, ಕಂಬಳದ ಸಂದರ್ಭದಲ್ಲಿ ತೆಗೆದುಕೊಳ್ಳಬೇಕಾದ ಎಚ್ಚರಿಕಾ ಕ್ರಮಗಳ ಬಗ್ಗೆಯೂ ತಿಳಿಸಿದ್ದಾರೆ. ಮಾಸ್ಕ್ ಧರಿಸುವುದು, ಸಾಮಾಜಿಕ ಅಂತರ ಕಾಪಾಡುವ ಬಗ್ಗೆ ಗಮನ ವಹಿಸಲು ತಿಳಿಸಿದ್ದಾರೆ. ಜೊತೆಗೆ ಪ್ರದೇಶದಲ್ಲಿ ಹೆಚ್ಚು ಜನಸಂದಣಿಯಾಗದಂತೆ ಎಚ್ಚರ ವಹಿಸುವುದು, ಕಂಬಳದ ಕೋಣಗಳ ಓಟವನ್ನು ನಿಗದಿತ ಸಮಯದಲ್ಲಿಯೇ ಮುಗಿಸುವುದಕ್ಕೆ ಪ್ರಯತ್ನ ನಡೆಸುವಂತೆಯೂ ಅವರು ತಿಳಿಸಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.