ನವದೆಹಲಿ: ಕೋವಿಡ್ -19 ಸಾಂಕ್ರಾಮಿಕದ ಸಂದರ್ಭದಲ್ಲಿ ಭಾರತ 150 ಕ್ಕೂ ಹೆಚ್ಚು ರಾಷ್ಟ್ರಗಳಿಗೆ ವೈದ್ಯಕೀಯ ಸರಬರಾಜು ಮತ್ತು ಉಪಕರಣಗಳನ್ನು ಒದಗಿಸಿದೆ ಎಂದು ವಿದೇಶಾಂಗ ಸಚಿವ ಎಸ್. ಜೈಶಂಕರ್ ಹೇಳಿದ್ದಾರೆ.
ಇಸ್ರೇಲ್ನ ರಾಷ್ಟ್ರೀಯ ಭದ್ರತಾ ಅಧ್ಯಯನ ಸಂಸ್ಥೆಯ 14 ನೇ ವಾರ್ಷಿಕ ಸಮ್ಮೇಳನವನ್ನುದ್ದೇಶಿಸಿ ಮಾತನಾಡಿದ ಅವರು, ಭಾರತೀಯರು ತಮ್ಮ ನೆಲದಲ್ಲಿ ಸಾಮೂಹಿಕ ವ್ಯಾಕ್ಸಿನೇಷನ್ ಕಾರ್ಯಕ್ರಮವನ್ನು ಪ್ರಾರಂಭಿಸಿದ್ದಾರೆ, ಮಾತ್ರವಲ್ಲದೇ ತನ್ನ ಹತ್ತಿರದ ನೆರೆಹೊರೆಯವರಿಗೆ ಭಾರತೀಯ ಲಸಿಕೆ ಸರಬರಾಜು ಮಾಡುವುದನ್ನು ಪ್ರಾರಂಭಿಸಿದ್ದಾರೆ.
ಇದು ಮುಂದಿನ ದಿನಗಳಲ್ಲಿ ಇತರ ಪಾಲುದಾರ ರಾಷ್ಟ್ರಗಳನ್ನು ಒಳಗೊಳ್ಳುವ ನಿರೀಕ್ಷೆಯಿದೆ ಎಂದು ಜೈಶಂಕರ್ ಹೇಳಿದ್ದಾರೆ.
ನಾವು ಎದುರಿಸುತ್ತಿರುವ ಗಂಭೀರ ಸಮಸ್ಯೆಗಳನ್ನು ಹಿಮ್ಮೆಟ್ಟಿಸಲು ಹೆಚ್ಚು ಸಾಮೂಹಿಕ ಪ್ರಯತ್ನದ ಅಗತ್ಯವಿದೆ. ಆಗ ಮಾತ್ರ ಜಗತ್ತು ಪ್ರಯೋಜನ ಪಡೆಯಬಹುದು ಎಂದು ಅವರು ಹೇಳಿದರು.
ಸಾಂಕ್ರಾಮಿಕ ರೋಗಗಳನ್ನು ಎದುರಿಸುವುದು ಮುಂದಿನ ದಿನಗಳಲ್ಲಿ ಜಾಗತಿಕ ಕಾರ್ಯಸೂಚಿಯಲ್ಲಿ ಸ್ವಾಭಾವಿಕವಾಗಿ ಪ್ರಾಬಲ್ಯ ಸಾಧಿಸುತ್ತದೆ ಎಂದು ಡಾ.ಜೈಶಂಕರ್ ಅಭಿಪ್ರಾಯಿಸಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.