ಲಕ್ನೋ: ಉತ್ತರ ಪ್ರದೇಶವು ಎಲೆಕ್ಟ್ರಿಕ್ ವಾಹನ (ಇವಿ) ಗಳ ಹಬ್ ಆಗುವತ್ತ ದಾಪುಗಾಲಿಡುತ್ತಿದೆ. ಪರಿಸರ ಸ್ನೇಹಿ ವಾಹನಗಳ ಉತ್ಪಾದನೆಯನ್ನು ಉತ್ತೇಜಿಸಲು ಪ್ರಯತ್ನಗಳನ್ನು ಮಾಡುವಂತೆ, ನೀತಿ ರೂಪಿಸುವಂತೆ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಸಂಬಂಧಪಟ್ಟ ಅಧಿಕಾರಿಗಳಿಗೆ ನಿರ್ದೇಶನ ನೀಡಿದ್ದಾರೆ.
ರಾಜ್ಯ ಸರ್ಕಾರದ ವಕ್ತಾರರ ಪ್ರಕಾರ, ಎಲೆಕ್ಟ್ರಿಕ್ ವಾಹನಗಳ ಉದ್ಯಮಕ್ಕೆ ಸಹಾಯ ಮಾಡಲು ಸಂಶೋಧನೆ ಮತ್ತು ಅಭಿವೃದ್ಧಿ, ಪರೀಕ್ಷೆ ಮತ್ತು ಪ್ರಮಾಣೀಕರಣಕ್ಕಾಗಿ ಮುಂದಿನ ದಿನಗಳಲ್ಲಿ ‘ಸೆಂಟರ್ ಆಫ್ ಎಕ್ಸಲೆನ್ಸ್’ ಸ್ಥಾಪಿಸಲು ರಾಜ್ಯವು ಪ್ರಸ್ತಾಪಿಸಿದೆ.
ಇವಿಗಳನ್ನು ಉತ್ಪಾದಿಸುವ ಘಟಕಗಳಿಗೆ ತಮ್ಮ ಸರ್ಕಾರವು ಎಲ್ಲ ರೀತಿಯ ಸಹಾಯವನ್ನು ನೀಡುತ್ತದೆ ಎಂದು ಅವರು ಭರವಸೆ ನೀಡಿದ್ದಾರೆ.
ರಾಜ್ಯದಲ್ಲಿ ಎಲೆಕ್ಟ್ರಿಕ್ ವಾಹನಗಳ ಉತ್ಪಾದನಾ ಘಟಕಗಳನ್ನು ಸ್ಥಾಪಿಸಲು ವಿವಿಧ ಅಂತರರಾಷ್ಟ್ರೀಯ ವಾಹನ ಕಂಪನಿಗಳಿಂದ ಪ್ರಸ್ತಾವನೆಗಳು ಬಂದಿವೆ. ರಾಜ್ಯದಲ್ಲಿ ಕೈಗಾರಿಕಾ ಹೂಡಿಕೆಯನ್ನು ಉತ್ತೇಜಿಸಲು ನಾವು ಅವರಿಗೆ ಸಾಧ್ಯವಿರುವ ಎಲ್ಲ ಸಹಾಯವನ್ನು ನೀಡುತ್ತೇವೆ ಎಂದು ಆದಿತ್ಯನಾಥ್ ಈಗಾಗಲೇ ಹೇಳಿದ್ದಾರೆ.
ʼಸೆಂಟರ್ ಅಫ್ ಎಕ್ಸಲೆನ್ಸ್ʼ ಅನ್ನು ಶೀಘ್ರದಲ್ಲಿಯೇ ಸ್ಥಾಪಿಸಲಾಗುವುದು ಮತ್ತು ಸಾಧ್ಯವಾದಷ್ಟು ಕೈಗಾರಿಕಾ ಸಂಸ್ಥೆಗಳಿಂದ ನೆರವು ಪಡೆಯಲಾಗುವುದು ಎಂದು ಮುಖ್ಯಮಂತ್ರಿ ಹೇಳಿದ್ದರು. ಈ ಕ್ರಮವು ರಾಷ್ಟ್ರೀಯ ಆರ್ಥಿಕತೆಗೆ ಹೊಸ ಆಯಾಮವನ್ನು ನೀಡುತ್ತದೆ ಎಂದು ತಿಳಿಸಿದ್ದಾರೆ.
ಇವಿಗಳ ಬಳಕೆಯನ್ನು ಉತ್ತೇಜಿಸುವ ಸಲುವಾಗಿ ರಸ್ತೆ ತೆರಿಗೆ ಮತ್ತು ನೋಂದಣಿ ಶುಲ್ಕದಲ್ಲಿ ವಿನಾಯಿತಿ ನೀಡುವ ಬಗ್ಗೆ ಆದಿತ್ಯನಾಥ್ ಮಾತನಾಡಿದ್ದಾರೆ.
ಎಲೆಕ್ಟ್ರಿಕ್ ವಾಹನಗಳ ವಲಯವು ಮೊಳಕೆಯೊಡೆಯುತ್ತಿರುವುದರಿಂದ, ಈ ವಲಯದಲ್ಲಿ ಮೆಗಾ ಹೂಡಿಕೆಗಳನ್ನು ಉತ್ತೇಜಿಸಲು ಸರ್ಕಾರದ ನೀತಿಗಳನ್ನು ಉದಾರೀಕರಣಗೊಳಿಸುವ ಅವಶ್ಯಕತೆಯಿದೆ ಎಂದು ಮುಖ್ಯಮಂತ್ರಿ ಹೇಳಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.