ಬೆಂಗಳೂರು: ಪಾರಂಪರಿಕ ವೃಕ್ಷಗಳನ್ನು ಸಂರಕ್ಷಣೆ ಮಾಡುವ ಸಲುವಾಗಿ ಇತರ ರಾಜ್ಯಗಳು ಅನುಸರಿಸಿರುವ ಮಾದರಿಯನ್ನು ಅನುಸರಿಸಲು ರಾಜ್ಯದ ಜೀವ ವೈವಿಧ್ಯ ಮಂಡಳಿ ನಿರ್ಧರಿಸಿದೆ.
ಈ ಸಂಬಂಧ ಮಂಡಳಿ ಅಧಿಕಾರಿಗಳು ಸುದೀರ್ಘ ಚರ್ಚೆ ನಡೆಸಿದ್ದು ಚಂಢೀಗಢ, ಉತ್ತರ ಪ್ರದೇಶ ಸೇರಿದಂತೆ ದೇಶದ ಇತರ ರಾಜ್ಯಗಳು, ಕೇಂದ್ರಾಡಳಿತ ಪ್ರದೇಶಗಳು ಕೈಗೊಂಡಿರುವ ಕ್ರಮಗಳ ಮಾದರಿಯನ್ನು ಅನುಸರಿಸಿಕೊಂಡು, ರಾಜ್ಯದಲ್ಲಿಯೂ ಪಾರಂಪರಿಕ ಸಸ್ಯಗಳ ಸಂರಕ್ಷಣೆಗೆ ಕ್ರಮ ಕೈಗೊಳ್ಳುವ ನಿಟ್ಟಿನಲ್ಲಿ ಮಹತ್ವದ ನಿರ್ಧಾರವನ್ನು ತೆಗೆದುಕೊಂಡಿವೆ. ಅಂತರರಾಷ್ಟ್ರೀಯ ಜೀವ ವೈವಿಧ್ಯ ದಿನವನ್ನು ಮೇ. 22 ರಂದು ದೊಡ್ಡ ಮಟ್ಟದಲ್ಲಿ ಆಚರಣೆ ಮಾಡುವ ನಿಟ್ಟಿನಲ್ಲಿಯೂ ಈ ಸಭೆಯಲ್ಲಿ ಅಧಿಕಾರಿಗಳು ನಿರ್ಧರಿಸಿರುವುದಾಗಿ ಮೂಲಗಳು ತಿಳಿಸಿವೆ.
ವೃಕ್ಷ ಸಂರಕ್ಷಣೆಗೆ ಸಂಬಂಧಿಸಿದಂತೆ ಜೀವ ವೈವಿಧ್ಯ ಕಾಯ್ದೆ 37 ರಲ್ಲಿ ಯಾವುದೇ ಅಂಶಗಳನ್ನು ನಮೂದಿಸದ ಕಾರಣ, ಇದಕ್ಕಾಗಿ ಪ್ರತ್ಯೇಕ ಮಾರ್ಗಸೂಚಿಗಳನ್ನು ಬಿಡುಗಡೆ ಮಾಡುವ ಅಗತ್ಯತೆ ಇದೆ. ಸರ್ಕಾರ ಅರಣ್ಯ ನೀತಿಯಲ್ಲಿಯೂ ಕೆಲವು ಬದಲಾವಣೆಗಳನ್ನು ಮಾಡಬೇಕಿದೆ. ಈ ನಿಟ್ಟಿನಲ್ಲಿ ಸರ್ಕಾರ ಮತ್ತು ಜೀವ ವೈವಿಧ್ಯ ಮಂಡಳಿ ಕಾರ್ಯ ನಿರ್ವಹಿಸುತ್ತಿದ್ದರೂ, ಸಂಪೂರ್ಣವಾಗಿ ಯಶಸ್ಸು ಕಂಡಿಲ್ಲ. ಹೀಗಾಗಿ ಇತರ ರಾಜ್ಯಗಳ ಮಾದರಿಗಳನ್ನು ಅನುಸರಿಸಿಕೊಂಡು ವೃಕ್ಷ ಸಂರಕ್ಷಣೆ ಮಾಡಲು ಮುಂದಾಗಿರುವುದಾಗಿ ಅಧಿಕಾರಿಗಳು ಹೇಳಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.