ನವದೆಹಲಿ: ಇಂದು ರಾಷ್ಟ್ರಪಿತ ಮಹಾತ್ಮ ಗಾಂಧೀಜಿಯವರ 73ನೇ ಪುಣ್ಯತಿಥಿ. ಈ ಹಿನ್ನೆಲೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಗೌರವ ನಮನ ಸಲ್ಲಿಸಿದ್ದಾರೆ, ಅವರ ಚಿಂತನೆ ಕೋಟ್ಯಂತರ ಜನರಿಗೆ ಪ್ರೇರಣಾದಾಯಿಯಾಗಿದೆ ಎಂದಿದ್ದಾರೆ.
ಟ್ವಿಟ್ ಮಾಡಿರುವ ಮೋದಿ, “ಪುಣ್ಯತಿಥಿಯಂದು ಮಹಾನ್ ಬಾಪು ಅವರಿಗೆ ಗೌರವಾರ್ಪಣೆ. ಅವರ ಆದರ್ಶಗಳು ಲಕ್ಷಾಂತರ ಜನರನ್ನು ಪ್ರೇರೇಪಿಸುತ್ತಲೇ ಇವೆ. ಹುತಾತ್ಮರ ದಿನದಂದು ಭಾರತದ ಸ್ವಾತಂತ್ರ್ಯ ಮತ್ತು ಪ್ರತಿಯೊಬ್ಬ ಭಾರತೀಯರ ಯೋಗಕ್ಷೇಮಕ್ಕಾಗಿ ತಮ್ಮನ್ನು ತಾವು ಅರ್ಪಿಸಿಕೊಂಡ ಎಲ್ಲ ಮಹಾನ್ ಮಹಿಳೆಯರು ಮತ್ತು ಪುರುಷರ ವೀರ ತ್ಯಾಗವನ್ನು ನಾವು ನೆನಪಿಸಿಕೊಳ್ಳುತ್ತೇವೆ” ಎಂದಿದ್ದಾರೆ.
ಪ್ರತಿವರ್ಷ ಜನವರಿ 30 ಅನ್ನು ಭಾರತದಲ್ಲಿ ಹುತಾತ್ಮರ ದಿನವನ್ನಾಗಿ ಆಚರಣೆ ಮಾಡಲಾಗುತ್ತದೆ. ಸ್ವಾತಂತ್ರ್ಯಕ್ಕಾಗಿ, ಸಮಾಜಕ್ಕಾಗಿ ಜೀವನ ಸಮರ್ಪಣೆ ಮಾಡಿದ ವೀರರನ್ನು ಈ ದಿನ ಸ್ಮರಿಸಲಾಗುತ್ತದೆ.
1948ರ ಜನವರಿ 30ರಂದು ಮಹಾತ್ಮ ಗಾಂಧೀಜಿಯವರು ಹುತಾತ್ಮರಾದರು.
Tributes to the great Bapu on his Punya Tithi. His ideals continue to motivate millions.
On Martyrs’ Day we recall the heroic sacrifices of all those great women and men who devoted themselves towards India’s freedom and the well-being of every Indian.
— Narendra Modi (@narendramodi) January 30, 2021
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.