ಬೆಂಗಳೂರು: ನಗರದಲ್ಲಿ ಪ್ರಯಾಣಕ್ಕಾಗಿ ಮೆಟ್ರೋ ರೈಲುಗಳನ್ನು ಅವಲಂಬಿಸಿರುವ ಗ್ರಾಹಕರನ್ನು ಗಮನದಲ್ಲಿರಿಸಿಕೊಂಡು ‘ಮೆಟ್ರೋ ಕಾರ್ಡ್’ ಅನ್ನು ಸುಲಭವಾಗಿ ಮತ್ತು ಸರಳವಾಗಿ ರಿಚಾರ್ಜ್ ಮಾಡುವುದಕ್ಕೆ ಪೂರಕ ಅನುಕೂಲಗಳನ್ನು ಮಾಡಿಕೊಡಲಾಗಿದೆ.
ಇಂದಿನಿಂದ (ಜ. 30) ತೊಡಗಿದಂತೆಯೇ ಈ ಕ್ರಮವನ್ನು ಜಾರಿಗೊಳಿಸಲಾಗಿದ್ದು, ಕ್ಯೂ ಆರ್ ಕೋಡ್ ಅನ್ನು ಸ್ಕ್ಯಾನ್ ಮಾಡುವ ಮೂಲಕ ಪ್ರಯಾಣಿಕರಿಗೆ ಮೆಟ್ರೋ ಕಾರ್ಡ್ ಅನ್ನು ರಿಚಾರ್ಜ್ ಮಾಡುವ ಅವಕಾಶವನ್ನು ಮಾಡಿಕೊಡಲಾಗಿದೆ. ಈ ಸೌಲಭ್ಯವನ್ನು ಮೆಟ್ರೋ ಸ್ಟೇಷನ್‌ಗಳಲ್ಲಿಯೂ ಅಳವಡಿಸಲಾಗಿದ್ದು, ಸಾರ್ವಜನಿಕರು ಇದರ ಉಪಯೋಗ ಪಡೆದುಕೊಳ್ಳುವಂತೆ ಮೆಟ್ರೋ ಅಧಿಕಾರಿಗಳು ಸೂಚಿಸಿದ್ದಾರೆ.
ಇಂದಿನಿಂದ ಆರಂಭಗೊಂಡು 40 ಮೆಟ್ರೋ ಸ್ಟೇಷನ್‌ಗಳಲ್ಲಿ ಮೊದಲ ಮತ್ತು ಎರಡನೇ ಹಂತದಲ್ಲಿ ಈ ಸೌಲಭ್ಯವನ್ನು ಕಲ್ಪಿಸಲಾಗುತ್ತದೆ. ಯಾವುದೇ ಯುಪಿಐ ಅನ್ನು ಬಳಸಿಕೊಂಡು ಹಣ ಪಾವತಿ ಮಾಡಬಹುದಾಗಿದೆ ಎಂದು ಮೆಟ್ರೋ ಅಧಿಕಾರಿಗಳು ಹೇಳಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.