ಹಾಸನ: ರಾಜ್ಯದಲ್ಲಿ ಸುಗ್ರೀವಾಜ್ಞೆ ಮೂಲಕ ಗೋ ಹತ್ಯೆ ನಿಷೇಧ ಕಾಯ್ದೆಯನ್ನು ಈಗಾಗಲೇ ಜಾರಿಗೊಳಿಸಲಾಗಿದೆ. ವಿಧಾನ ಪರಿಷತ್ನಲ್ಲಿ ಮಸೂದೆ ಮಂಡನೆ ಮಾಡಿ ಬಹುಮತ ಸಾಬೀತು ಮಾಡುವುದಾಗಿ ಪಶು ಸಂಗೋಪನಾ ಸಚಿವ ಪ್ರಭು ಚೌಹಾಣ್ ತಿಳಿಸಿದ್ದಾರೆ.
ಗೋವು ನಮ್ಮೆಲ್ಲರ ತಾಯಿ ಇದ್ದಂತೆ. ಅವುಗಳ ರಕ್ಷಣೆ ನಮ್ಮೆಲ್ಲರ ಹೊಣೆ. ಅವುಗಳನ್ನು ಕಸಾಯಿಖಾನೆಗೆ ಸಾಗಿಸದಂತೆ, ಅವುಗಳ ಹತ್ಯೆಯಾಗದಂತೆ ಎಲ್ಲರೂ ಎಚ್ಚರ ವಹಿಸಬೇಕಿದೆ. ಈ ಹಿನ್ನೆಲೆಯಲ್ಲಿ ಗೋ ಹತ್ಯೆ ನಿಷೇಧ ಕಾಯ್ದೆಯನ್ನು ಜಾರಿಗೆ ತರುತ್ತಿರುವುದಾಗಿ ಅವರು ತಿಳಿಸಿದ್ದಾರೆ. ಗೋವುಗಳ ಅಕ್ರಮ ಸಾಗಾಟ, ಕಳ್ಳತನ ಮಾಡಿದವರ ವಿರುದ್ಧ ಎಫ್ಐಆರ್ ದಾಖಲು ಮಾಡಲಾಗುತ್ತದೆ ಎಂದು ಅವರು ಹೇಳಿದ್ದಾರೆ. ಗೋ ಹತ್ಯೆ ನಡೆಸಿದಲ್ಲಿ ಮೊದಲ ಬಾರಿ 50 ಸಾವಿರದಿಂದ ಒಂದು ಲಕ್ಷದ ವರೆಗೆ ಮತ್ತು ಎರಡನೇ ಬಾರಿ ಹತ್ಯೆ ಮಾಡಿದಲ್ಲಿ 10 ಲಕ್ಷಗಳ ವರೆಗೆ ದಂಡ, ಏಳು ವರ್ಷಗಳ ಜೈಲುಶಿಕ್ಷೆ ಅನುಭವಿಸಬೇಕಾಗುತ್ತದೆ ಎಂದು ಅವರು ತಿಳಿಸಿದ್ದಾರೆ.
ಗೋವುಗಳ ರಕ್ಷಣೆಗೆ ರಾಜ್ಯದ ಎಲ್ಲಾ ಜಿಲ್ಲೆಗಳ ಡಿಸಿ, ಎಸ್ಪಿ ಗಳಿಗೂ ಸರ್ಕಾರ ಸೂಚನೆ ನೀಡಿದೆ. ರಾಜ್ಯದ ಪ್ರತಿ ತಾಲೂಕಿನಲ್ಲಿಯೂ ಗೋ ಶಾಲೆಗಳನ್ನು ತೆರೆಯುವ ನಿಟ್ಟಿನಲ್ಲಿ ಕ್ರಮ ಕೈಗೊಳ್ಳಲಾಗುವುದು. ಗೋ ಮಾಳಕ್ಕೆ ಜಾಗ ಗುರುತಿಸುವಂತೆಯೂ ಅಧಿಕಾರಿಗಳಿಗೆ ಸೂಚನೆ ನೀಡಲಾಗಿರುವುದಾಗಿ ಚೌಹಾಣ್ ಮಾಹಿತಿ ನೀಡಿದ್ದಾರೆ. ಗೋ ಶಾಲೆಗಳಲ್ಲಿನ ಗೋವುಗಳಿಗೆ ಮೇವು ಮತ್ತು ಇತರ ಸೌಲಭ್ಯಗಳನ್ನು ಕಲ್ಪಿಸಲಾಗುವುದು ಎಂದು ಅವರು ತಿಳಿಸಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.