ಬೆಂಗಳೂರು: ಕೊರೋನಾ ಬಳಿಕ ರಾಜ್ಯದಲ್ಲಿ ಈಗಾಗಲೇ 10 ಮತ್ತು 12 ನೇ ತರಗತಿ ವಿದ್ಯಾರ್ಥಿಗಳಿಗೆ ಭೌತಿಕ ತರಗತಿಗಳು ಆರಂಭವಾಗಿದ್ದು, ಇಂದಿನಿಂದ ತೊಡಗಿದಂತೆ 9 ಮತ್ತು 11 ನೇ ತರಗತಿ ವಿದ್ಯಾರ್ಥಿಗಳಿಗೆ ಭೌತಿಕ ತರಗತಿಗಳು ಆರಂಭವಾಗುತ್ತಿದೆ.
ಸೋಮವಾರದಿಂದ ಶುಕ್ರವಾರದ ವರೆಗೆ 9 ರಿಂದ 12 ನೇ ತರಗತಿಯ ವಿದ್ಯಾರ್ಥಿಗಳಿಗೆ ಬೆಳಗ್ಗೆ 10 ರಿಂದ ಸಂಜೆ 4.30 ರ ವರೆಗೆ ಮತ್ತು ಶನಿವಾರದಂದು 10 ರಿಂದ 12.30 ರ ವರೆಗೆ ಭೌತಿಕ ತರಗತಿಗಳನ್ನು ನಡೆಸಲು ಸರ್ಕಾರ ಸೂಚನೆ ನೀಡಿದೆ. ಜನವರಿ 1 ರಿಂದ ತೊಡಗಿದಂತೆ 10 ಮತ್ತು 12 ನೇ ತರಗತಿ ವಿದ್ಯಾರ್ಥಿಗಳಿಗೆ ಭೌತಿಕ ತರಗತಿಗಳು ಆರಂಭವಾಗಿದ್ದು, ಬೆಳಗ್ಗಿನಿಂದ ಮಧ್ಯಾಹ್ನದವರೆಗೆ ಮಾತ್ರವೇ ಬೋಧನೆಗಳು ನಡೆಯುತ್ತಿದ್ದವು, ಇದೀಗ 9 ರಿಂದ 12 ನೇ ತರಗತಿ ವಿದ್ಯಾರ್ಥಿಗಳಿಗೆ ಪೂರ್ಣ ಪ್ರಮಾಣದಲ್ಲಿ ತರಗತಿಗಳನ್ನು ನಡೆಸುವಂತೆ ಸರ್ಕಾರ ಸೂಚನೆ ನೀಡಿದೆ.
ತರಗತಿಗಳಲ್ಲಿ ಮಾಸ್ಕ್ ಧರಿಸುವುದು, ಸಾಮಾಜಿಕ ಅಂತರ ಕಾಪಾಡಿಕೊಳ್ಳುವುದು ಸೇರಿದಂತೆ ಇನ್ನಿತರ ಕೋವಿಡ್ ನಿಯಮಗಳನ್ನು ಕಡ್ಡಾಯವಾಗಿ ಪಾಲನೆ ಮಾಡುವಂತೆಯೂ ಶಾಲೆಗಳಿಗೆ ಸೂಚನೆ ನೀಡಲಾಗಿದೆ. ಹಾಗೆಯೇ, 8 ನೇ ತರಗತಿ ವರೆಗಿನ ವಿದ್ಯಾರ್ಥಿಗಳ ಶಾಲಾರಂಭಕ್ಕೆ ಕುರಿತಂತೆ ಫೆಬ್ರವರಿ ಎರಡನೇ ವಾರದಲ್ಲಿ ಸಲಹಾ ಸಮಿತಿಯ ಜೊತೆಗೆ ಚರ್ಚೆ ನಡೆಸಿ ತೀರ್ಮಾನ ಕೈಗೊಳ್ಳಲಾಗುವುದು ಎಂದು ಸರ್ಕಾರದ ಮೂಲಗಳು ತಿಳಿಸಿವೆ. ಆ ವರೆಗೆ 1-5 ವಿದ್ಯಾರ್ಥಿಗಳಿಗೆ ಟಿವಿ, ರೇಡಿಯೋ, ಯೂಟ್ಯೂಬ್ಗಳ ಮೂಲಕ ಶಿಕ್ಷಣ ನೀಡುವಂತೆ ಸೂಚಿಸಲಾಗಿದೆ. 6-8 ನೇ ವರೆಗಿನ ವಿದ್ಯಾರ್ಥಿಗಳಿಗೆ ವಿದ್ಯಾಗಮದ ಮೂಲಕ ತರಗತಿಗಳನ್ನು ಮುಂದುವರೆಸುವಂತೆಯೂ ಸೂಚಿಸಲಾಗಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.