ಬೆಂಗಳೂರು: ಕೌನ್ಸಲಿಂಗ್ ಮೂಲಕ ಸರ್ಕಾರಿ ಪದವಿ, ಎಂಜಿನಿಯರಿಂಗ್ ಮತ್ತು ಡಿಪ್ಲೊಮಾ ಕಾಲೇಜುಗಳ ಉಪನ್ಯಾಸಕರ ವರ್ಗಾವಣೆ ಪ್ರಕ್ರಿಯೆ ನಡೆಯಲಿದೆ ಎಂದು ಉಪಮುಖ್ಯಮಂತ್ರಿ ಡಾ. ಅಶ್ವತ್ಥ್ ನಾರಾಯಣ್ ತಿಳಿಸಿದ್ದಾರೆ.
ಒಟ್ಟು ಬೋಧನಾ ಸಿಬ್ಬಂದಿಯ 15% ಮೀರದಂತೆ ವರ್ಗಾವಣೆ ಪ್ರಕ್ರಿಯೆ ನಡೆಸಲಾಗುವುದು. ಓರ್ವ ಉಪನ್ಯಾಸಕ 4 ವರ್ಷಗಳಿಂದ ಒಂದೇ ಕಡೆಯಲ್ಲಿ ಕಾರ್ಯ ನಿರ್ವಹಿಸಿದ್ದರೆ ಅವರಿಗೆ ಈ ಬಾರಿಯ ವರ್ಗಾವಣೆಯಲ್ಲಿ ಹೆಚ್ಚಿನ ಪ್ರಾಶಸ್ತ್ಯ ನೀಡಲಾಗುತ್ತದೆ. ಪದವಿ ಹಾಗೂ ತಾಂತ್ರಿಕ ಶಿಕ್ಷಣ ಸಂಸ್ಥೆಗಳಲ್ಲಿ ಕಾರ್ಯ ನಿರ್ವಹಿಸುತ್ತಿರುವ ಉಪನ್ಯಾಸಕರಿಗೆ ಈ ನಿಯಮ ಅನ್ವಯವಾಗಲಿದೆ ಎಂದು ಅವರು ಹೇಳಿದ್ದಾರೆ.
ವರ್ಗಾವಣೆ ಪ್ರಕ್ರಿಯೆಯ ಕೌನ್ಸಲಿಂಗ್ ಗೆ ಸಂಬಂಧಿಸಿದಂತೆ ಶೀಘ್ರದಲ್ಲೇ ದಿನಾಂಕ ಪ್ರಕಟ ಮಾಡಲಾಗುತ್ತದೆ. ಸರ್ವರಿಗೂ ಒಪ್ಪಿತವಾಗುವ ರೀತಿಯಲ್ಲಿ ಈ ವರ್ಗಾವಣೆ ಪ್ರಕ್ರಿಯೆಯನ್ನು ನಡೆಸಲಾಗುವುದಾಗಿಯೂ ಅವರು ತಿಳಿಸಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.