ಬೆಂಗಳೂರು: ರಾಜ್ಯದಲ್ಲಿ ಖಾಲಿ ಇರುವ ಉಪಲೋಕಾಯುಕ್ತ ಹುದ್ದೆಯನ್ನು ಶೀಘ್ರದಲ್ಲೇ ಭರ್ತಿ ಮಾಡಬೇಕು ಎಂದು ರಾಜ್ಯ ಸರ್ಕಾರಕ್ಕೆ ಹೈ ಕೋರ್ಟ್ ನಿರ್ದೇಶನ ನೀಡಿದೆ.
2019 ರ ಸಂದರ್ಭದಲ್ಲಿಯೇ ವಕೀಲ ಎಸ್. ಉಮಾಪತಿ ಅವರು ಉಪಲೋಕಾಯುಕ್ತ ಹುದ್ದೆ ಖಾಲಿ ಇರುವುದಕ್ಕೆ ಸಂಬಂಧಿಸಿದಂತೆ ಹೈಕೋರ್ಟ್ಗೆ ಅರ್ಜಿ ಸಲ್ಲಿಸಿದ್ದರು. ಈ ಸಂಬಂಧ ವಿಚಾರಣೆ ನಡೆಸಿರುವ ಕೋರ್ಟ್ ಉಪಲೋಕಾಯುಕ್ತ ಹುದ್ದೆಯನ್ನು ಭರ್ತಿ ಮಾಡುವಂತೆ ರಾಜ್ಯ ಸರ್ಕಾರಕ್ಕೆ ಸೂಚನೆ ನೀಡಿದೆ.
2019 ರ ನವೆಂಬರ್ ತಿಂಗಳಿನಲ್ಲಿ ನ್ಯಾಯಮೂರ್ತಿ ಬಿ.ಎಸ್. ಪಾಟೀಲ್ ಅವರನ್ನು ಉಪಲೋಕಾಯುಕ್ತ ಹುದ್ದೆಗೆ ನೇಮಕ ಮಾಡಲಾಗಿತ್ತು. 2020 ರ ಡಿಸೆಂಬರ್ ತಿಂಗಳಿನಲ್ಲಿ ಇನ್ನೊಬ್ಬ ಉಪಲೋಕಾಯುಕ್ತ ನ್ಯಾಯಮೂರ್ತಿ ಎನ್. ಆನಂದ್ ಅವರು ನಿವೃತ್ತಿ ಹೊಂದಿದ್ದಾರೆ. ಈ ಹಿನ್ನೆಲೆಯಲ್ಲಿ ಹೈಕೋರ್ಟ್ನ ಮುಖ್ಯ ನ್ಯಾಯಮೂರ್ತಿ, ವಿಧಾನಸಭೆ ಸ್ಪೀಕರ್ ಮತ್ತು ವಿಧಾನ ಪರಿಷತ್ ಅಧ್ಯಕ್ಷರ ಜೊತೆಗೆ ಸಮಾಲೋಚನೆ ನಡೆಸಿ, ಬಳಿಕ ನೇಮಕ ಮಾಡಲಾಗುವುದಾಗಿ ಸರ್ಕಾರದ ಪರ ವಕೀಲರು ತಿಳಿಸಿದ್ದಾರೆ.
ಶೀಘ್ರದಲ್ಲೇ ಈ ಪ್ರಕ್ರಿಯೆ ಪೂರ್ಣಗೊಳಿಸುವಂತೆ ನ್ಯಾಯಮೂರ್ತಿ ಸತೀಶ್ ಚಂದ್ರ ಶರ್ಮಾ, ನ್ಯಾಯಮೂರ್ತಿ ವಿ. ಶ್ರೀಷಾನಂದ ಅವರು ಸೂಚಿಸಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.