ನವದೆಹಲಿ: ಮಯನ್ಮಾರಿನಲ್ಲಿ ನಡೆಯುತ್ತಿರುವ ಬೆಳವಣಿಗೆ ಮತ್ತು ಮಿಲಿಟರಿ ದಂಗೆಗೆ ಸಂಬಂಧಿಸಿದಂತೆ ಅಂತರರಾಷ್ಟ್ರೀಯ ಪ್ರತಿಕ್ರಿಯೆ ಕುರಿತು ಚರ್ಚಿಸಲು ಯುಎನ್ ಸೆಕ್ಯುರಿಟಿ ಕೌನ್ಸಿಲ್ ಇಂದು ಸಭೆ ಸೇರಲಿದೆ. ಭದ್ರತಾ ಮಂಡಳಿಯ ಅಧ್ಯಕ್ಷ ಸ್ಥಾನವನ್ನು ವಹಿಸಿಕೊಂಡಿರುವ ಯುನೈಟೆಡ್ ಕಿಂಗ್ಡಮ್ ಮಯನ್ಮಾರಿನ ಪರಿಸ್ಥಿತಿಯನ್ನು ತುರ್ತು ಆಧಾರದ ಮೇಲೆ ಚರ್ಚಿಸಲು ಯೋಜಿಸಿದೆ ಎಂದು ಹೇಳಲಾಗಿದೆ.
ಮತದಾನದ ಮೂಲಕ ಜನರು ವ್ಯಕ್ತಪಡಿಸಿದ ಇಚ್ಛೆಯನ್ನು ಗೌರವಿಸುವ ಮತ್ತು ನಾಗರಿಕ ಸಮಾಜದ ಮುಖಂಡರನ್ನು ಬಿಡುಗಡೆ ಮಾಡುವ ಉದ್ದೇಶದಿಂದ ಕೌನ್ಸಿಲ್ ಹಲವಾರು ಕ್ರಮಗಳ ಬಗ್ಗೆ ಪರಿಶೀಲನೆ ನಡೆಸಲಿದೆ ಎಂದು ಬ್ರಿಟನ್ನ ಯುಎನ್ ರಾಯಭಾರಿ ಬಾರ್ಬರಾ ವುಡ್ವರ್ಡ್ ಸುದ್ದಿಗಾರರಿಗೆ ತಿಳಿಸಿದ್ದಾರೆ.
ನಿನ್ನೆ ಮುಂಜಾನೆ ನಡೆಸಿದ ದಾಳಿಯಲ್ಲಿ ಮಿಲಿಟರಿಯು ಮಯನ್ಮಾರ್ ಅಧಿಕಾರವನ್ನು ವಶಪಡಿಸಿಕೊಂಡಿದೆ ಮತ್ತು ಒಂದು ವರ್ಷ ದೇಶದಲ್ಲಿ ತುರ್ತು ಪರಿಸ್ಥಿತಿ ಘೋಷಿಸಿದೆ. ನೊಬೆಲ್ ಪ್ರಶಸ್ತಿ ವಿಜೇತ ಆಂಗ್ ಸಾನ್ ಸೂಕಿ ಸೇರಿದಂತೆ ಮಯನ್ಮಾರ್ ಸರ್ಕಾರದ ಸದಸ್ಯರನ್ನು ಸೇನೆಯು ವಶಕ್ಕೆ ತೆಗೆದುಕೊಂಡಿದೆ. ಅಧ್ಯಕ್ಷ ಯು ವಿನ್ ಮೈಂಟ್ ಮತ್ತು ಇತರ ಹಿರಿಯ ಅಧಿಕಾರಿಗಳು ಕೂಡ ಬಂಧಿತರಾಗಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.