ನವದೆಹಲಿ: ಕೋವಿಡ್ 19 ನಿರ್ವಹಣೆಗಾಗಿ ಸಾರ್ವಜನಿಕ ಆರೋಗ್ಯ ಕ್ರಮಗಳನ್ನು ರೂಪಿಸುವಲ್ಲಿ ರಾಜ್ಯ ಆರೋಗ್ಯ ಅಧಿಕಾರಿಗಳೊಂದಿಗೆ ಸಹಕರಿಸಲು ಕೇರಳ ಮತ್ತು ಮಹಾರಾಷ್ಟ್ರಕ್ಕೆ ಎರಡು ಉನ್ನತ ಮಟ್ಟದ ತಂಡಗಳನ್ನು ನಿಯೋಜಿಸಲು ಮೋದಿ ಸರ್ಕಾರ ನಿರ್ಧರಿಸಿದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ಪ್ರಕಟಣೆಯಲ್ಲಿ ತಿಳಿಸಿದೆ.
ಕೋವಿಡ್-19 ಪ್ರಕರಣ ಬಹುತೇಕ ಎಲ್ಲಾ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಲ್ಲಿ ಕುಸಿಯುತ್ತಿದೆ ಮತ್ತು ಸಾವುಗಳ ಸಂಖ್ಯೆಯಲ್ಲೂ ಕ್ಷೀಣಿಸುತ್ತಿರುವ ಪ್ರವೃತ್ತಿಯನ್ನು ತೋರಿಸುತ್ತಿದೆ, ಆದರೆ ಕೇರಳ ಮತ್ತು ಮಹಾರಾಷ್ಟ್ರಗಳಲ್ಲಿ ಇನ್ನೂ ಹೆಚ್ಚಿನ ಸಂಖ್ಯೆಯ ಪ್ರಕರಣಗಳನ್ನು ವರದಿ ಆಗುತ್ತಿವೆ.
ಪ್ರಸ್ತುತ, ಈ ಎರಡು ರಾಜ್ಯಗಳು ದೇಶದಲ್ಲಿ ಶೇಕಡಾ 70 ರಷ್ಟು ಸಕ್ರಿಯ ಕೋವಿಡ್ 19 ಪ್ರಕರಣಗಳನ್ನು ಹೊಂದಿವೆ.
ಮಹಾರಾಷ್ಟ್ರಕ್ಕೆ ಕಳುಹಿಸಲ್ಪಡುವ ಕೇಂದ್ರ ತಂಡವು ರಾಷ್ಟ್ರೀಯ ರೋಗ ನಿಯಂತ್ರಣ ಕೇಂದ್ರ (ಎನ್ಸಿಡಿಸಿ) ಮತ್ತು ನವದೆಹಲಿಯ ಡಾ. ಆರ್.ಎಂ.ಎಲ್ ಆಸ್ಪತ್ರೆಯ ತಜ್ಞರನ್ನು ಒಳಗೊಂಡಿದೆ.
ಕೇರಳ ತಂಡವು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯದ ಹಿರಿಯ ಅಧಿಕಾರಿಗಳೊಂದಿಗೆ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಪ್ರಾದೇಶಿಕ ಕಚೇರಿ, ತಿರುವನಂತಪುರಂ ಮತ್ತು ನವದೆಹಲಿಯ ಲೇಡಿ ಹಾರ್ಡಿಂಗ್ ವೈದ್ಯಕೀಯ ಕಾಲೇಜಿನ ತಜ್ಞರನ್ನು ಒಳಗೊಂಡಿರುತ್ತದೆ.
ಕೇಂದ್ರ ತಂಡಗಳು ರಾಜ್ಯ ಆರೋಗ್ಯ ಇಲಾಖೆಗಳೊಂದಿಗೆ ನಿಕಟವಾಗಿ ಕೆಲಸ ಮಾಡುತ್ತವೆ, ತಳಮಟ್ಟದ ಸನ್ನಿವೇಶಗಳನ್ನು ಸಂಗ್ರಹಿಸಲಿವೆ.
ವರದಿಯ ಪ್ರಕಾರ, ಮಹಾರಾಷ್ಟ್ರದಲ್ಲಿ ಒಟ್ಟು ಸಕ್ರಿಯ ಪ್ರಕರಣಗಳ ಸಂಖ್ಯೆ 44,944 ಮತ್ತು ಕೇರಳವು 69,456 ಸಕ್ರಿಯ ಪ್ರಕರಣಗಳನ್ನು ಹೊಂದಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.