ನವದೆಹಲಿ: ಸ್ವಾತಂತ್ರ್ಯ ಸಂಗ್ರಾಮದ ವೇಳೆ ಅತ್ಯಂತ ಮಹತ್ವವನ್ನು ಪಡೆದುಕೊಂಡ ಹೋರಾಟಗಳಲ್ಲಿ ‘ಚೌರಿ ಚೌರ’ ಹೋರಾಟ ಕೂಡ ಒಂದು. ಈ ಹೋರಾಟಕ್ಕೆ 100 ವರ್ಷಗಳು ಪೂರೈಸುತ್ತಿದೆ. ಈ ಹಿನ್ನೆಲೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಫೆಬ್ರವರಿ 4ರಂದು ವಿಡಿಯೋ ಕಾನ್ಫರೆನ್ಸ್ ಮೂಲಕ 100ನೇ ವರ್ಷಾಚರಣೆಗೆ ಚಾಲನೆಯನ್ನು ನೀಡಲಿದ್ದಾರೆ.
ಇಂದು ಪ್ರಧಾನಿ ಮೋದಿಯವರು ‘ಚೌರಿ ಚೌರ’ ಹೋರಾಟದ ಸ್ಮರಣಾರ್ಥ ಅಂಚೆಚೀಟಿಯನ್ನು ಬಿಡುಗಡೆ ಮಾಡಲಿದ್ದಾರೆ ಎಂದು ಪಿಎಂಒ ಪ್ರಕಟಣೆಯಲ್ಲಿ ತಿಳಿಸಿದೆ.
“ಈ ಹೋರಾಟದ ಶತಮಾನೋತ್ಸವದ ಅಂಗವಾಗಿ ಉತ್ತರಪ್ರದೇಶ ರಾಜ್ಯದ ಎಲ್ಲಾ 75 ಜಿಲ್ಲೆಗಳಲ್ಲಿ ಸರ್ಕಾರ ವಿವಿಧ ಕಾರ್ಯಕ್ರಮಗಳನ್ನು ಆಯೋಜನೆಗೊಳಿಸಿದೆ. ಮುಂದಿನ ವರ್ಷದ ಫೆ.4ರವರೆಗೂ ಕಾರ್ಯಕ್ರಮ ಮುಂದುವರೆಯಲಿದೆ” ಎಂದಿದೆ.
1922ರಲ್ಲಿ ಮಹಾತ್ಮ ಗಾಂಧೀಜಿ ಅವರು ಆಯೋಜಿಸಿದ್ದ ಅಸಹಾಕಾರ ಚಳುವಳಿಯ ಸಂದರ್ಭದಲ್ಲಿ ಚೌರಿ ಚೌರಾದಲ್ಲಿ ಹೋರಾಟ ನಡೆಸುತ್ತಿದ್ದವರ ಮೇಲೆ ಪೊಲೀಸರು ಗುಂಡು ಹಾರಿಸಿದ್ದರು, ಹಲವು ಮಂದಿ ಈ ಘಟನೆಯಲ್ಲಿ ಸಾವನ್ನಪ್ಪಿದ್ದರು. ಆಕ್ರೋಶ ಭರಿತ ಹೋರಾಟಗಾರರು ಚೌರಿ ಚೌರಾ ಪೊಲೀಸ್ ಠಾಣೆಗೆ ಬೆಂಕಿ ಹಚ್ಚಿದರು. ಈ ಹಿಂಸಾಚಾರದಿಂದ ನೊಂದ ಗಾಂಧೀಜಿ ಅಸಹಕಾರ ಚಳವಳಿಯನ್ನು ನಿಲ್ಲಿಸಿದರು.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.