ಬೆಂಗಳೂರು: ನಗರದ ಯಲಹಂಕ ವಾಯುನೆಲೆಯಲ್ಲಿ ನಡೆಯುತ್ತಿರುವ ಏರೋ ಇಂಡಿಯಾ ಏರ್ ಶೋ- 2021 ರಾಜ್ಯಕ್ಕೆ ಹೆಮ್ಮೆಯ ವಿಚಾರವಾಗಿದೆ ಎಂದು ಮುಖ್ಯಮಂತ್ರಿ ಯಡಿಯೂರಪ್ಪ ತಿಳಿಸಿದ್ದಾರೆ.
ಕೊರೋನಾ ಸೋಂಕಿನ ನಡುವೆಯೇ ಈ ಬಾರಿಯ ಏರ್ ಶೋ ನಡೆಯುತ್ತಿದೆ. ಇಂತಹ ಸವಾಲಿನ ನಡುವೆಯೂ ರಾಜ್ಯ ಸರ್ಕಾರ ಈ ವೈಮಾನಿಕ ಪ್ರದರ್ಶನಕ್ಕೆ ಸಂಪೂರ್ಣ ಸಹಕಾರವನ್ನು ಒದಗಿಸುತ್ತಿದೆ ಎಂದು ಅವರು ತಿಳಿಸಿದ್ದಾರೆ. ದೇಶದ 65% ಗಳಷ್ಟು ಯುದ್ಧ ವಿಮಾನವನ್ನು ಕರ್ನಾಟಕದ ಬೆಂಗಳೂರಿನಲ್ಲಿಯೇ ಸಿದ್ಧಪಡಿಸಲಾಗುತ್ತದೆ. ಪ್ರಧಾನಿ ನರೇಂದ್ರ ಮೋದಿ ಅವರ ನೇತೃತ್ವದಲ್ಲಿ ಆತ್ಮನಿರ್ಭರದ ಕನಸು ಸಾಕಾರಗೊಳ್ಳುತ್ತಿದ್ದು, ದೇವನಹಳ್ಳಿಯಲ್ಲಿ ಏರೋಸ್ಪೇಸ್ ಪಾರ್ಕ್ ಸಿದ್ಧವಾಗುತ್ತಿದೆ. 2 ಅಂತರಾಷ್ಟ್ರೀಯ ಮತ್ತು 5 ಡೊಮೆಸ್ಟಿಕ್ ಏರ್ಪೋರ್ಟ್ಗಳು ಇವೆ. ಕರ್ನಾಟಕ ಸ್ವದೇಶೀ ಕಲ್ಪನೆಗೆ ಹೆಚ್ಚಿನ ಮಹತ್ವ ನೀಡಿ ಕಾರ್ಯ ನಿರ್ವಹಿಸುತ್ತಿದೆ ಎಂದು ಬಿಎಸ್ವೈ ತಿಳಿಸಿದ್ದಾರೆ.
ಈ ಬಾರಿಯ ಏರ್ ಶೋ ಕೊರೋನಾ ಕರಿನೆರಳಿನಲ್ಲಿಯೇ ನಡೆಯುತ್ತಿದೆ. ಈ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರ ಅಗತ್ಯ ಭದ್ರತಾ ವ್ಯವಸ್ಥೆ, ಸುರಕ್ಷತಾ ಕ್ರಮಗಳನ್ನು ಈ ಏರ್ ಶೋ ಗೆ ಒದಗಿಸಿಕೊಟ್ಟಿದೆ. ಶೋ ನಡೆಯುತ್ತಿರುವ ಹಿನ್ನೆಲೆಯಲ್ಲಿ ಐಲಹಂಕ ವಾಯುನೆಲೆಯ ಸುತ್ತಮುತ್ತಲಲ್ಲಿ ವಾಹನಗಳಿಗೆ ಪ್ರವೇಶ ನಿರ್ಬಂಧ ಹೇರಲಾಗಿದೆ. ಜೊತೆಗೆ ರಸ್ತೆಗಳಲ್ಲಿ ನಿಂತು ಏರ್ ಶೋ ವೀಕ್ಷಣೆ ಮಾಡುವುದಕ್ಕೂ ಅವಕಾಶ ನೀಡಲಾಗಿಲ್ಲ. ಆದರೆ ಸಾರ್ವಜನಿಕರಿಗೆ ವರ್ಚುವಲ್ ಮೂಲಕ ಈ ವೈಮಾನಿಕ ಪ್ರದರ್ಶನ ವೀಕ್ಷಣೆಗೆ ಅವಕಾಶ ಒದಗಿಸಲಾಗಿದೆ ಎಂದು ಅವರು ತಿಳಿಸಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.