ಬೆಂಗಳೂರು: ಕೊರೋನಾ ಹಿನ್ನೆಲೆಯಲ್ಲಿ ಪ್ರಸಕ್ತ ಶೈಕ್ಷಣಿಕ ವರ್ಷದ ಖಾಸಗಿ ಅನುದಾನ ರಹಿತ ಶಾಲೆಗಳಿಗೆ ಸಂಬಂಧಿಸಿದಂತೆ ಶುಲ್ಕಗಳ ವಿಚಾರವಾಗಿ ಪೋಷಕರ ಸಮಸ್ಯೆಗಳನ್ನು ಬಗೆಹರಿಸುವ ನಿಟ್ಟಿನಲ್ಲಿ ಅಧಿಕಾರಯುಕ್ತ ಸಮಿತಿಗಳನ್ನು ರಚನೆ ಮಾಡಲಾಗಿದೆ ಎಂದು ಸಚಿವ ಸುರೇಶ್ ಕುಮಾರ್ ತಿಳಿಸಿದ್ದಾರೆ.
ಖಾಸಗಿ ಶಾಲೆಗಳು ಈ ಬಾರಿ ಕೇವಲ 70% ಗಳಷ್ಟು ಮಾತ್ರವೇ ಶುಲ್ಕವನ್ನು ವಿದ್ಯಾರ್ಥಿಗಳಿಂದ ಪಡೆಯಬಹುದಾಗಿದೆ ಎಂದು ರಾಜ್ಯ ಸರ್ಕಾರ ಕೆಲ ದಿನಗಳ ಹಿಂದಷ್ಟೇ ಆದೇಶ ಹೊರಡಿಸಿತ್ತು. ಈ ಸಂಬಂಧ ಸಮಸ್ಯೆಗಳ ಪರಿಹಾರಕ್ಕೆ ಅಧಿಕಾರಯುಕ್ತ ಸಮಿತಿಗಳ ರಚನೆಯನ್ನು ಮಾಡಿರುವುದಾಗಿ ಅವರು ಹೇಳಿದ್ದಾರೆ.
ಬೆಂಗಳೂರಿನ 6 ವಲಯಗಳಿಗೆ ಸಂಬಂಧಿಸಿದಂತೆ ಪ್ರತ್ಯೇಕ ಸಮಿತಿಗಳು, ಮೈಸೂರಿನಲ್ಲಿ 2 ಮತ್ತು ರಾಜ್ಯದ ಇತರೆಲ್ಲಾ ಜಿಲ್ಲೆಗಳಲ್ಲಿಯೂ ತಲಾ ಒಂದೊಂದು ಸಮಿತಿಗಳನ್ನು ರಚನೆ ಮಾಡಲಾಗಿದೆ. ಈ ಸಮಿತಿಯು ಇಲಾಖಾ ನಿರ್ದೇಶಕರು, ಸಹ ನಿರ್ದೇಶಕರು, ಡಿಡಿಪಿಐ, ಡಯಟ್ ಪ್ರಾಚಾರ್ಯರು, ಹಿರಿಯ ಉಪನ್ಯಾಸಕರನ್ನೊಳಗೊಂಡಿದೆ ಎಂದು ಸಚಿವರು ತಿಳಿಸಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.