ಮಡಿಕೇರಿ: ಕೇಂದ್ರ ಸರ್ಕಾರದಿಂದ ಮಂಡಿಸಲ್ಪಟ್ಟ ಬಜೆಟ್ಗೆ ಸಂಬಂಧಿಸಿದಂತೆ ಕಾಂಗ್ರೆಸ್ ನಾಯಕ ಸಿದ್ದರಾಮಯ್ಯ ಅವರ ಪ್ರತಿಕ್ರಿಯೆಗೆ ಕೇಂದ್ರ ಸಚಿವೆ ಸದಾನಂದ ಗೌಡ ಅವರು ತಿರುಗೇಟು ನೀಡಿದ್ದಾರೆ.
ಸಿದ್ದರಾಮಯ್ಯ ಅವರು ಐದು ವರ್ಷಗಳ ಕಾಲ ಮುಖ್ಯಮಂತ್ರಿಯಾಗಿದ್ದು, 10 ಬಾರಿ ಬಜೆಟ್ ಮಂಡನೆ ಮಾಡಿದ್ದಾರೆ. ಈ ಅನುಭವವಿದ್ದೂ ಅವರು ಕೇಂದ್ರ ಸಚಿವೆ ನಿರ್ಮಲಾ ಸೀತಾರಾಮ್ ಅವರು ಮಂಡಿಸಿರುವ ಬಜೆಟ್ ಬಗ್ಗೆ ಯೋಗ್ಯವಲ್ಲದ ರೀತಿಯಲ್ಲಿ ಪ್ರತಿಕ್ರಿಯೆ ನೀಡಿದ್ದಾರೆ. ಅವರ ಈ ನಡೆಗೆ ಮುಂದಿನ ದಿನಗಳಲ್ಲಿ ಜನರೇ ಉತ್ತರ ನೀಡಲಿದ್ದಾರೆ ಎಂದು ಸದಾನಂದ ಗೌಡ ತಿಳಿಸಿದ್ದಾರೆ.
ಕೇಂದ್ರ ಸರ್ಕಾರ ಪೆಟ್ರೋಲ್ ಮೇಲೆ ವಿಧಿಸಿರುವ ಸೆಸ್ ಕುರಿತು ವಿವರಿಸಿದ ಅವರು, ತೆರಿಗೆ ಮತ್ತು ಸೆಸ್ ನಡುವಿನ ವ್ಯತ್ಯಾಸವನ್ನು ಅರಿತುಕೊಳ್ಳದೆಯೇ ಬಜೆಟ್ ಬಗ್ಗೆ ಪ್ರತಿಕ್ರಿಯೆಯನ್ನು ಸಿದ್ದರಾಮಯ್ಯ ನೀಡಿದ್ದಾರೆ. ವಿಧಿಸಲಾಗುವ ತೆರಿಗೆಯನ್ನು ಬೇರೆ ಬೇರೆ ಉದ್ದೇಶಗಳಿಗೆ ಬಳಕೆ ಮಾಡುವುದು ಸಾಧ್ಯವಿದೆ. ಆದರೆ ಸೆಸ್ ಅನ್ನು ನಿರ್ದಿಷ್ಟ ಉದ್ದೇಶಕ್ಕಾಗಿ ಮಾತ್ರವೇ ಬಳಕೆ ಮಾಡಲಾಗುತ್ತದೆ. ಈ ವ್ಯತ್ಯಾಸವನ್ನು ಗಮನಿಸಿಕೊಂಡು ಮತ್ತೆ ಬಜೆಟ್ ಬಗ್ಗೆ ಪ್ರತಿಕ್ರಿಯೆ ನೀಡಿದರೆ ಉತ್ತಮವಾಗಿತ್ತು ಎಂದು ತಿಳಿಸಿದ್ದಾರೆ. ತೆರಿಗೆಯಿಂದ ಬಂದ ಹಣವನ್ನು 8 ಕೋಟಿ ಮಹಿಳೆಯರಿಗೆ ನೀಡಲಾಗುತ್ತಿರುವ ಉಚಿತ ಅಡುಗೆ ಅನಿಲಕ್ಕಾಗಿ ಬಳಕೆ ಮಾಡಲಾಗುತ್ತದೆ ಎಂದು ಸಚಿವರು ಹೇಳಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.