ಬೆಂಗಳೂರು: ನಗರದ ಯಲಹಂಕ ವಾಯುನೆಲೆಯಲ್ಲಿ ನಡೆಯುತ್ತಿರುವ ಏರೋ ಇಂಡಿಯಾ ವೈಮಾನಿಕ ಪ್ರದರ್ಶನ- 2021 ರಲ್ಲಿ ಸಂಸದ ತೇಜಸ್ವಿ ಸೂರ್ಯ ಭಾಗಿಯಾಗಿದ್ದು, ತೇಜಸ್ ಯುದ್ಧ ವಿಮಾನದಲ್ಲಿ 15 ಸಾವಿರ ಅಡಿಗಳಷ್ಟು ಎತ್ತರದಲ್ಲಿ ಹಾರಾಟ ನಡೆಸಿದರು.
ಬಳಿಕ ಮಾತನಾಡಿದ ಅವರು, ಈ ಅನುಭವ ಅವರ್ಣನೀಯ. 15 ಸಾವಿರ ಅಡಿ ಎತ್ತರದಲ್ಲಿ 1 ಸಾವಿರ ಕಿ.ಮೀ ವೇಗದಲ್ಲಿ ಹಾರಾಟ ನಡೆಸಿರುವುದು ಖುಷಿ ಕೊಟ್ಟಿದೆ ಎಂದು ತಿಳಿಸಿದರು. ಈ ಯುದ್ಧ ವಿಮಾನ ಸ್ವದೇಶಿ ನಿರ್ಮಿತವಾಗಿದ್ದು, ಡಿಆರ್ಡಿಒ ಅಭಿವೃದ್ಧಿ ಮಾಡಿದೆ. ಭಾರತೀಯ ವಿಮಾನದ ಈ ವಿಮಾನ ಅದ್ಭುತವಾಗಿದೆ ಎಂದು ಹೇಳಿದ್ದಾರೆ. ಈ ಲಘು ಯುದ್ಧ ವಿಮಾನವನ್ನು ತಯಾರಿಸಿದ ಎಂಜಿನಿಯರ್, ನೌಕರರಿಗೆ ಗೌರವ ಸಲ್ಲಿಸುವುದಾಗಿ ತಿಳಿಸಿದ್ದಾರೆ.
ಕೆಲವು ವರ್ಷಗಳ ಹಿಂದೆ ಈ ಏರ್ ಶೋ ವನ್ನು ನೇರವಾಗಿ ಕಣ್ತುಂಬಿಕೊಳ್ಳಲು ಪಾಸುಗಳು ಸಿಗುತ್ತಿರಲಿಲ್ಲ. ಆದರೆ ಈಗ ನೇರವಾಗಿ ಈ ಪ್ರದರ್ಶನ ಸಮಾರಂಭದಲ್ಲಿ ಭಾಗವಹಿಸಲು ಸಿಗುತ್ತಿರುವ ಅವಕಾಶಗಳ ಮಿತಿ ಹೆಚ್ಚಿದೆ. ಏರೋ ಇಂಡಿಯಾ ವಿಮಾನದಲ್ಲಿ ಹಾರಾಟ ನಡೆಸಿರುವುದು ತುಂಬಾ ಖುಷಿ ಕೊಟ್ಟಿರುವುದಾಗಿ ತೇಜಸ್ವಿ ಸೂರ್ಯ ಹೇಳಿದ್ದಾರೆ.
Sharing more pictures onboard the Tejas aircraft.#CelebrateLCATejas pic.twitter.com/UBMfbFySSb
— Tejasvi Surya (@Tejasvi_Surya) February 4, 2021
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.